HomeEntertainmentಫೆಬ್ರವರಿ 23ಕ್ಕೆ ತೆರೆ ಕಾಣಲಿದೆ 'mr ನಟ್ವ‌ರ್ ಲಾಲ್'

ಫೆಬ್ರವರಿ 23ಕ್ಕೆ ತೆರೆ ಕಾಣಲಿದೆ ‘mr ನಟ್ವ‌ರ್ ಲಾಲ್’

ತನುಷ್ ಶಿವಣ್ಣ ಹಾಗೂ ಸೋನಾಲ್ ಅಭಿನಯದ ‘ನಟ್ವ‌ರ್ ಲಾಲ್’ ಚಿತ್ರದ ಬಿಡುಗಡೆ ದಿನಾಂಕವನ್ನು ಇಂದು ಸೋಶಿಯಲ್ ಮೀಡಿಯಾದಲ್ಲಿ ಅನೌನ್ಸ್ ಮಾಡಲಾಗಿದೆ. ಫೆಬ್ರವರಿ 23ರಂದು ಈ ಸಿನಿಮಾ ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ಈ ಕುರಿತು ನಟ ತನುಷ್ ಶಿವಣ್ಣ ತಮ್ಮ instagram ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಕ್ರೈಂ ಥ್ರಿಲ್ಲರ್  ಕಥಾಹಂದರ ಹೊಂದಿರುವ ಈ ಚಿತ್ರವನ್ನು ವಿ ಲಾವ ನಿರ್ದೇಶಿಸಿದ್ದು, ನಟ ತನುಷ್ ಶಿವಣ್ಣ ಅವರೇ ತಮ್ಮ ತನುಷ್ ಸಿನಿಮಾ ಸಿನಿಮಾಸ್ ಬ್ಯಾನರ್ ನಲ್ಲಿ ನಿರ್ಮಾಣ ಮಾಡಿದ್ದಾರೆ. ಕೆ ಎಂ ಪ್ರಕಾಶ್ ಸಂಕಲನವಿದ್ದು, ವಿಲಿಯಂ ಡೇವಿಡ್ ಛಾಯಾಗ್ರಹಣವಿದೆ. ಧರ್ಮ ವಿಶ್ ಸಂಗೀತ ಸಂಯೋಜನೆ ನೀಡಿದ್ದಾರೆ. ಇದೊಂದು ನೈಜ ಘಟನೆಯಾಧಾರಿತ ಸಿನಿಮಾ ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular