HomeKarnatakaBREAKING NEWS: ಕತ್ತು ಸೀಳಿ ವಿದ್ಯಾರ್ಥಿನಿಯ ಬರ್ಬರ ಹತ್ಯೆ ಪ್ರಕರಣ: ಆರೋಪಿ ಅರೆಸ್ಟ್

BREAKING NEWS: ಕತ್ತು ಸೀಳಿ ವಿದ್ಯಾರ್ಥಿನಿಯ ಬರ್ಬರ ಹತ್ಯೆ ಪ್ರಕರಣ: ಆರೋಪಿ ಅರೆಸ್ಟ್

ರಾಯಚೂರು: ಎಂಎಸ್ ಸಿ ವಿದ್ಯಾರ್ಥಿನಿಯ ಕತ್ತು ಸೀಳಿ ಬರ್ಬರವಾಗಿ ಹತ್ಯೆ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಯಚೂರಿನ ಸಿಂಧನೂರು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಎಂಎಸ್ ಸಿ ವಿದ್ಯಾರ್ಥಿನಿ ಶಿಫಾ ಕೊಲೆಯಾಗಿರುವ ಯುವತಿ. ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಹೊರ ಭಾಗದಲ್ಲಿ ವಿದ್ಯಾರ್ಥಿನಿ ಶಿಫಾಳನ್ನು ಕತ್ತು ಸೀಳಿ ಹತ್ಯೆ ಮಾಡಲಾಗಿತ್ತು. ಪರಿಚಯಸ್ಥರಿಂದಲೇ ವಿದ್ಯಾರ್ಥಿನಿ ಕೊಲೆಯಾಗಿರುವ ಶಂಕೆ ವ್ಯಕ್ತವಾಗಿತ್ತು.

ಪ್ರಕರಣದ ತನಿಖೆ ನಡೆಸಿದ ಪೊಲೀಸರು ಕೊಲೆಯಾದ ಕೆಲವೇ ಗಂಟೆಗಳಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ. ಮುಬಿನ್ ಬಂಧಿತ ಆರೋಪಿ. ವಿದ್ಯಾರ್ಥಿನಿಯ ಹತ್ಯೆಗೆ ನಿಖರ ಕಾರಣ ಇನ್ನಷ್ಟೇ ತಿಳಿಯಬೇಕಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular