HomeJobsಎಂಎಸ್‌ಐಎಲ್ ಚಿಟ್ ಫಂಡ್ಸ್: ಮಾರ್ಚ್ 10, 11ರಂದು ನೇರ ಸಂದರ್ಶನ

ಎಂಎಸ್‌ಐಎಲ್ ಚಿಟ್ ಫಂಡ್ಸ್: ಮಾರ್ಚ್ 10, 11ರಂದು ನೇರ ಸಂದರ್ಶನ

ಮೈಸೂರು ಸೇಲ್ಸ್ ಇಂಟರ್ನ್ಯಾಷನಲ್ ಲಿಮಿಟೆಡ್ (ಎಂಎಸ್‌ಐಎಲ್) 1966ರಲ್ಲಿ ಸ್ಥಾಪಿತವಾದ ಕರ್ನಾಟಕ ಸರ್ಕಾರದ ಪ್ರಮುಖ ಮಾರುಕಟ್ಟೆ ಅಂಗಸಂಸ್ಥೆ. ಎಂಎಸ್ಐಎಲ್  ಚಿಟ್ ಫಂಡ್ಸ್ ಶಾಖಾ ವ್ಯವಸ್ಥಾಪಕ ಹುದ್ದೆಗೆ ನೇರ ಸಂದರ್ಶನವನ್ನು ಆಯೋಜನೆ ಮಾಡಿದೆ.

ಮಾರ್ಚ್ 10, 11ರಂದು ಬೆಂಗಳೂರು ನಗರದಲ್ಲಿ ಬೆಳಗ್ಗೆ 11.30 ರಿಂದ ಮಧ್ಯಾಹ್ನ 1.30ರ ತನಕ ಮತ್ತು ಮಧ್ಯಾಹ್ನ 2.30 ರಿಂದ 5.30ರ ತನಕ ನೇರ ಸಂದರ್ಶನ ನಡೆಯಲಿದ್ದು, ಆಸಕ್ತರು ಪಾಲ್ಗೊಳ್ಳಬಹುದು.

ಈ ಕುರಿತು ಪ್ರಕಟಣೆ ಮೂಲಕ ಮಾಹಿತಿ ನೀಡಲಾಗಿದ್ದು, ಎಂಎಸ್‌ಐಎಲ್ ಕರ್ನಾಟಕ ಸರ್ಕಾರದ ಅಧೀನ ಸಂಸ್ಥೆಯಾಗಿದ್ದು, ಕಳೆದ 20 ವರ್ಷಗಳಿಂದ ಚಿಟ್ ಫಂಡ್ ವ್ಯವಹಾರದಲ್ಲಿ ತೊಡಗಿಸಿಕೊಂಡಿದೆ ಎಂದು ಹೇಳಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರಸ್ತುತ ರಾಜ್ಯದ 27 ಚಿಟ್ ಶಾಖೆಗಳನ್ನು ಹೊಂದಿದ್ದು, ಮುಂದಿನ ದಿನಗಳಲ್ಲಿಎಲ್ಲಾ ಪ್ರಮುಖ ನಗರಗಳಲ್ಲಿ ಶಾಖೆಗಳನ್ನು ತೆರೆಯುವ ಉದ್ದೇಶವನ್ನು ಹೊಂದಿದೆ. ಈ ಚಿಟ್ ಫಂಡ್ ಶಾಖೆಗಳಲ್ಲಿ ಶಾಖಾ ವ್ಯವಸ್ಥಾಪಕರಾಗಿ ಕಾರ್ಯ ನಿರ್ವಹಿಸಲು ವಾಕ್ ಇನ್ ಸಂದರ್ಶನ ಆಯೋಜಿಸಲಾಗಿದೆ.

 ಅನುಭವ ಹೊಂದಿರುವ ಪ್ರತಿಷ್ಠಿತ ಬ್ಯಾಂಕುಗಳು/ ಹಣಕಾಸು ಸಂಸ್ಥೆಗಳು/ ವಿಮೆ ಸಂಸ್ಥೆಗಳ ನಿವೃತ್ತ ಅಧಿಕಾರಿಗಳನ್ನು ನಿರ್ದಿಷ್ಟ ಅವಧಿಗೆ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ನೇರ ಸಂದರ್ಶನ ಕರೆಯಲಾಗಿದೆ.

ನೇರ ಸಂದರ್ಶನ ವಿಳಾಸ: ನೇರ ಸಂದರ್ಶನ ಮಾರ್ಚ್ 10, 11ರಂದು ಮೈಸೂರು ಸೇಲ್ಸ್ ಇಂಟರ್ ನ್ಯಾಷನಲ್ ಲಿಮಿಟೆಡ್ (ಎಂಎಸ್ಐಎಲ್), ಕೇಂದ್ರ ಕಚೇರಿ, # 36, ಕನ್ನಿಂಗ್ ಹ್ಯಾಂ ರಸ್ತೆ, ಬೆಂಗಳೂರು 560052 ಇಲ್ಲಿ ನಡೆಯಲಿದೆ.

ಒಂದು ವೇಳೆ ಈ ದಿನಾಂಕಕ್ಕೆ ನೇರ ಸಂದರ್ಶನಕ್ಕೆ ಹಾಜರಾಗದಿರಲು ಸಾಧ್ಯವಾಗದೇ ಇರುವವರು ಮುಖ್ಯ ಆಡಳಿತಾಧಿಕಾರಿಯವರು ಕಚೇರಿ ಮೈಸೂರು ಸೇಲ್ಸ್ ಇಂಟರ್‌ನ್ಯಾಷನಲ್ ಲಿಮಿಟೆಡ್, # 36, ಕನ್ನಿಂಗ್ ಹ್ಯಾಂ ರಸ್ತೆ, ಬೆಂಗಳೂರು 560052 ಇವರನ್ನು ಸಂಪರ್ಕಿಸಿ ಅಥವ [email protected] ಮುಖಾಂತರ ಸಂಪರ್ಕಿಸಬಹುದು.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular