HomeKarnatakaರೈತರಿಗೆ ಗುಡ್ ನ್ಯೂಸ್: ಬೆಂಬಲ ಬೆಲೆ ಪ್ರಕಟ ಬೆನ್ನಲ್ಲೇ ಹೆಸರು, ಉದ್ದು, ಸೂರ್ಯಕಾಂತಿ ಬೆಳೆ...

ರೈತರಿಗೆ ಗುಡ್ ನ್ಯೂಸ್: ಬೆಂಬಲ ಬೆಲೆ ಪ್ರಕಟ ಬೆನ್ನಲ್ಲೇ ಹೆಸರು, ಉದ್ದು, ಸೂರ್ಯಕಾಂತಿ ಬೆಳೆ ದರ ಹೆಚ್ಚಳ

ಬೆಂಗಳೂರು: ಎಪಿಎಂಸಿ ಕಾಯ್ದೆ ತಿದ್ದುಪಡಿ ಮಾಡಿ ವ್ಯವಸ್ಥೆ ಮರು ಜಾರಿಯಾದ ನಂತರ ರೈತರ ಉತ್ಪನ್ನಗಳಿಗೆ ಬೆಲೆ ಹೆಚ್ಚಳವಾಗಿದೆ. ಎಪಿಎಂಸಿಗಳ ಆದಾಯವೂ ಹೆಚ್ಚಳವಾಗಿದೆ. ರೈತರಿಗೆ ಸಾಕಷ್ಟು ಅನುಕೂಲವಾಗಿದೆ ಎಂದು ಕೃಷಿ ಉತ್ಪನ್ನ ಮಾರುಕಟ್ಟೆ ಮತ್ತು ಸಕ್ಕರೆ ಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆ.

ಏಕಕಾಲದಲ್ಲಿ ನಾಲ್ಕು ಬೆಳೆಗಳನ್ನು ಬೆಂಬಲ ಬೆಲೆ ಅಡಿ ಖರೀದಿಸುತ್ತಿದ್ದು, ರೈತರಿಗೆ ಅನುಕೂಲವಾಗಿದೆ. ಇದೇ ಮೊದಲ ಬಾರಿಗೆ ಹೆಸರು ಕಾಳು, ಸೂರ್ಯಕಾಂತಿ, ಸೋಯಾಬಿನ್, ಉದ್ದಿನ ಕಾಳನ್ನು ಏಕಕಾಲದಲ್ಲಿ ಬೆಂಬಲ ಬೆಲೆ ಆಧರಿಸಿ ಖರೀದಿಸುತ್ತಿದ್ದು, ಇದರಿಂದಾಗಿ ಮಾರುಕಟ್ಟೆಯಲ್ಲಿ ಕುಸಿತ ಕಂಡಿದ್ದ ಈ ನಾಲ್ಕು ಕೃಷಿ ಉತ್ಪನ್ನಗಳ ದರ ಹೆಚ್ಚಾಗಿದೆ ಎಂದು ತಿಳಿಸಿದ್ದಾರೆ.

ಈಗ ರೈತರಿಗೆ ಕೃಷಿ ಮಾರುಕಟ್ಟೆ ಬೆಂಬಲ ಬೆಲೆ ಒದಗಿಸುವ ಜೊತೆಗೆ ರೈತರು ದರ ಕುಸಿತದ ಆತಂಕಕ್ಕೆ ಒಳಗಾಗಿ ಕಡಿಮೆ ದರಕ್ಕೆ ಉತ್ಪನ್ನಗಳನ್ನು ಮಾರಾಟ ಮಾಡುವುದನ್ನು ತಪ್ಪಿಸಲಾಗುತ್ತಿದೆ. ಮಾರುಕಟ್ಟೆಯಲ್ಲಿ ಹೆಸರು ಕಾಳಿನ ದರ 6000 ರೂ.ಗೆ ಕುಸಿದಿತ್ತು. ಈಗ 8682 ರೂ. ಬೆಂಬಲ ಬೆಲೆ ಘೋಷಿಸಿದ ನಂತರ ಎರಡು ವಾರದಲ್ಲಿ ಮಾರುಕಟ್ಟೆಯಲ್ಲಿ ಹೆಸರುಕಾಳಿನ ದರ 8000 ರೂ.ಗೆ ಹೆಚ್ಚಳ ಕಂಡಿದೆ. ಎಪಿಎಂಸಿ ಆದಾಯ ಕೂಡ ಹೆಚ್ಚಾಗಿದೆ ಎಂದು ಮಾಹಿತಿ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular