HomeKarnatakaಮುಸ್ಲಿಂ ಸಮುದಾಯದ ಬಗ್ಗೆ ಹೇಳಿಕೆ: ಮಾಜಿ ಸಚಿವ ಎಂಟಿಬಿ ನಾಗರಾಜ್ ವಿರುದ್ಧ ಪ್ರತಿಭಟನೆ

ಮುಸ್ಲಿಂ ಸಮುದಾಯದ ಬಗ್ಗೆ ಹೇಳಿಕೆ: ಮಾಜಿ ಸಚಿವ ಎಂಟಿಬಿ ನಾಗರಾಜ್ ವಿರುದ್ಧ ಪ್ರತಿಭಟನೆ

ಬೆಂಗಳೂರು: ಮುಸ್ಲಿಮರ ವಿರುದ್ಧ ಮಾಜಿ ಸಚಿವ ಎಂಟಿಬಿ ನಾಗರಾಜ್ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಲಾಗಿದ್ದು, ಅವರ ಹೇಳಿಕೆ ವಿರೋಧಿಸಿ ಜಾಮಿಯಾ ಮಸೀದಿ ವತಿಯಿಂದ ಪ್ರತಿಭಟನೆ ನಡೆಸಲಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ನಗರದಲ್ಲಿ ಪ್ರತಿಭಟನೆ ನಡೆಸಲಾಗಿದೆ. ಜೂನ್ 10 ರಂದು ಹೊಸಕೋಟೆ ನಗರದ ಕನಕ ಭವನದಲ್ಲಿ ನಡೆದ ಸೋಲಿನ ಆತ್ಮವಲೋಕನ ಸಭೆಯಲ್ಲಿ ಎಂಟಿಬಿ ನಾಗರಾಜ್ ಮುಸ್ಲಿಮರು ಮತ ಹಾಕದಿರುವುದಕ್ಕೆ ನನಗೆ ಸೋಲಾಯಿತು. ಬಿಜೆಪಿ ನೋಟು, ಕಾಂಗ್ರೆಸ್ ಗೆ ವೋಟು. ಅಲ್ಲಾ, ಕುರಾನ್ ಮೇಲೆ ಆಣೆ ಪ್ರಮಾಣ ಮಾಡಿ, ನನಗೆ ವೋಟ್ ಹಾಕಿಲ್ಲ. ಇನ್ನು ಮೇಲೆ ನಿಮಗೆ ಕೇರ್ ಮಾಡಲ್ಲ. ನಂಬಿಸಿ ಹಣ ಪಡೆದು ನನಗೆ ಮೋಸ ಮಾಡಿದ್ದಾರೆ ಎಂದು ಎಂಟಿಬಿ ಹೇಳಿದ್ದರೆನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅವರ ಹೇಳಿಕೆ ವಿರುದ್ಧ ಮುಸ್ಲಿಂ ಸಮುದಾಯ ಆಕ್ರೋಶ ವ್ಯಕ್ತಪಡಿಸಿದ್ದು, ಎಲ್ಲಿ? ಯಾರಿಗೆ? ಹೇಗೆ ಹಣ ಕೊಟ್ಟಿದ್ದಾರೆ ಎಂದು ಎಂಟಿಬಿ ನಾಗರಾಜ್ ಹೇಳಲಿ. ಕೂಡಲೇ ಕ್ಷಮೆ ಕೇಳಲಿ ಒತ್ತಾಯಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular