HomeKarnatakaBIG NEWS: ಮುಡಾ ಬದಲಿ ನಿವೇಶನ ಹಂಚಿಕೆ ಎಲ್ಲಾ ಆದೇಶಗಳು ತಕ್ಷಣದಿಂದಲೇ ರದ್ದು

BIG NEWS: ಮುಡಾ ಬದಲಿ ನಿವೇಶನ ಹಂಚಿಕೆ ಎಲ್ಲಾ ಆದೇಶಗಳು ತಕ್ಷಣದಿಂದಲೇ ರದ್ದು

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ) ಬದಲಿ ನಿವೇಶನ ಹಂಚಿಕೆಗೆ ಸಂಬಂಧಿಸಿದಂತೆ ನಿವೇಶನ ಹಂಚಿಕೆ ಮಾಡಿರುವ ಎಲ್ಲಾ ಆದೇಶಗಳು ರದ್ದು ಮಾಡಲಾಗಿದೆ.

ರಾಜ್ಯ ಸರ್ಕಾರದ 2023ರ ಮಾರ್ಚ್ 14ರ ನಿರ್ದೇಶನ ಉಲ್ಲಂಘಿಸಿ ಹಂಚಿಕೆ ಮಾಡಿರುವ ಮುಡಾ ನಿವೇಶನಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಈಗಾಗಲೇ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ನೋಂದಣಿ ವಿಚಾರಕ್ಕೆ ಸಂಬಂಧಿಸಿದಂತೆ ಬದಲಿ ನಿವೇಶನಗಳ ಕ್ರಯ ಪತ್ರ ರದ್ದು ಪಡಿಸಲು ಸಿವಿಲ್ ಕೋರ್ಟ್ ನಲ್ಲಿ ದಾವೆ ಹೂಡಲಾಗಿದೆ. ಬದಲಿ ನಿವೇಶನಗಳ ಖಾತೆ ಮಾಡುವುದನ್ನು ತಡೆಹಿಡಿಯಲು ಸ್ಥಳೀಯ ಸಂಸ್ಥೆಗಳಿಗೆ ರಾಜ್ಯ ಸರ್ಕಾರದಿಂದ ನಿರ್ದೇಶನ ನೀಡಲಾಗಿದೆ.

ಸರ್ಕಾರದ ಮಾರ್ಗಸೂಚಿ ಬರುವವರೆಗೆ ಕ್ರಯ ಪತ್ರ ನೀಡದಂತೆ ಸೂಚನೆ ನೀಡಲಾಗಿದೆ. ಈಗಾಗಲೇ ಖಾತೆಯಾಗಿದ್ದರೆ ನಿಯಮಾನುಸಾರ ರದ್ದುಪಡಿಸುವಂತೆಯೂ ಸೂಚನೆ ನೀಡಲಾಗಿದೆ. ಮಹಾನಗರ ಪಾಲಿಕೆ, ನಗರಸಭೆ ಮತ್ತು ಗ್ರಾಮ ಪಂಚಾಯಿತಿಗಳಿಗೆ ಈ ಬಗ್ಗೆ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ. ಉನ್ನತ ಮಟ್ಟದ ತಾಂತ್ರಿಕ ಸಮಿತಿಯ ಶಿಫಾರಸಿನಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ನಿರ್ದೇಶನವನ್ನು ಕಟ್ಟುನಿಟ್ಟಾಗಿ ಪಾಲಿಸಿ ಅನುಪಾಲನಾ ವರದಿ ಸಲ್ಲಿಸಲು ಸೂಚನೆ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಿಯಮ ಉಲ್ಲಂಘಿಸಿ ಮಾಡಲಾದ ಮುಡಾ 50:50 ಯೋಜನೆಯ ಮೊದಲ ಹಂತದ ಸುಮಾರು 1,100 ಬದಲಿ ನಿವೇಶನಗಳ ಹಂಚಿಕೆ ಆದೇಶಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸರ್ಕಾರ ರದ್ದುಗೊಳಿಸಿದೆ. ಅಂದಾಜು 2,000 ಕೋಟಿ ರೂ. ಮೌಲ್ಯದ ಈ ಅಕ್ರಮ ನಿವೇಶನ ಹಂಚಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗಿದೆ.

ಈಗಾಗಲೇ ನೋಂದಣಿಯಾದ ಕ್ರಯಪತ್ರಗಳನ್ನು ರದ್ದುಪಡಿಸಲು ಸಿವಿಲ್ ನ್ಯಾಯಾಲಯದಲ್ಲಿ ದಾವೆ ಹೂಡಲು ಸೂಚಿಸಲಾಗಿದೆ. ನೋಂದಣಿಯಾದ ನಿವೇಶನಗಳಿಗೆ ಖಾತಾ ನೀಡುವುದನ್ನು ತಕ್ಷಣ ನಿಲ್ಲಿಸಲು ಸ್ಥಳೀಯ ಸಂಸ್ಥೆಗಳಿಗೆ ನಿರ್ದೇಶಿಸಲಾಗಿದೆ. ಸರ್ಕಾರದ ಮುಂದಿನ ಮಾರ್ಗಸೂಚಿ ಬರುವವರೆಗೆ ಯಾವುದೇ ಹೊಸ ಕ್ರಯಪತ್ರಗಳನ್ನು ನೀಡದಂತೆ ಕಟ್ಟುನಿಟ್ಟಿನ ಆದೇಶಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular