ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ) ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿ ರಿಪೋರ್ಟ್ ಆದೇಶ ಪ್ರಶ್ನಿಸಿ ಹೈಕೋರ್ಟ್ ಗೆ ಜಾರಿ ನಿರ್ದೇಶನಾಲಯ(ಇಡಿ) ಅರ್ಜಿ ಸಲ್ಲಿಸಿದೆ.
ನಮ್ಮ ತನಿಖೆಯಲ್ಲಿ ಸಾಕಷ್ಟು ಮಾಹಿತಿ ಬಹಿರಂಗವಾಗಿದೆ. ಮುಡಾದಲ್ಲಿ ಹಗರಣ ನಡೆದಿದೆ. ನಾಲ್ವರು ಆರೋಪಿಗಳ ಪಾತ್ರ ಇರುವುದು ತನಿಖೆಯಲ್ಲಿ ಗೊತ್ತಾಗಿದೆ ಎಂದು ಕೆಳಹಂತದ ನ್ಯಾಯಾಲಯ ಆದೇಶ ಪ್ರಶ್ನಿಸಿ ಹೈಕೋರ್ಟ್ ಗೆ ಇಡಿ ಅಧಿಕಾರಿಗಳು ಅರ್ಜಿ ಸಲ್ಲಿಸಿದ್ದಾರೆ. ಸ್ನೇಹಮಯಿ ಕೃಷ್ಣ ನಂತರ ಇಡಿ ವತಿಯಿಂದಲೂ ಹೈಕೋರ್ಟ್ ಗೆ ಪ್ರತ್ಯೇಕ ಅರ್ಜಿ ಸಲ್ಲಿಸಲಾಗಿದೆ.

