HomeKarnatakaBREAKING: 'ಮುಡಾ' ತನಿಖೆಗೆ ಅನುಮತಿ ಆದೇಶ ರದ್ದುಪಡಿಸಲು ಹೈಕೋರ್ಟ್ ಗೆ ಸಿಎಂ ಮೇಲ್ಮನವಿ

BREAKING: ‘ಮುಡಾ’ ತನಿಖೆಗೆ ಅನುಮತಿ ಆದೇಶ ರದ್ದುಪಡಿಸಲು ಹೈಕೋರ್ಟ್ ಗೆ ಸಿಎಂ ಮೇಲ್ಮನವಿ

ಬೆಂಗಳೂರು: ಮುಡಾ ನಿವೇಶನ ಹಂಚಿಕೆ ಪ್ರಕರಣ ತನಿಖೆಗೆ ಅನುಮತಿ ನೀಡಿದ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದಾರೆ.

ಏಕ ಸದಸ್ಯ ಪೀಠದ ಆದೇಶವನ್ನು ರದ್ದುಪಡಿಸುವಂತೆ ಮುಖ್ಯಮಂತ್ರಿಗಳು ಮನವಿ ಮಾಡಿದ್ದಾರೆ. ಸೆಪ್ಟೆಂಬರ್ 24ರ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರು 14 ನಿವೇಶನಗಳನ್ನು ವಾಪಸ್ ಮಾಡಿದ್ದಾರೆ. ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಹೈಕೋರ್ಟ್ ಏಕಸದಸ್ಯ ಪೀಠ ಮಾನ್ಯ ಮಾಡಿದ್ದು, ಈ ಆದೇಶ ರದ್ದುಪಡಿಸಬೇಕೆಂದು ವಿಭಾಗೀಯ ಪೀಠಕ್ಕೆ ಸಿಎಂ ಮನವಿ ಮಾಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular