ಬೆಂಗಳೂರು: ಮುಡಾ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ) ಮಾಜಿ ಆಯುಕ್ತ ದಿನೇಶ್ ಕುಮಾರ್ ಮಧ್ಯಂತರ ಜಾಮೀನು ಅರ್ಜಿಯನ್ನು ಬೆಂಗಳೂರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿದೆ.
ಮುಡಾ ನಿವೇಶನ ಹಂಚಿಕೆಯಲ್ಲಿ ಭಾರಿ ಅಕ್ರಮ ಆರೋಪ ಪ್ರಕರಣದಲ್ಲಿ ಮಾಜಿ ಆಯುಕ್ತ ದಿನೇಶ್ ಕುಮಾರ್ ಅವರನ್ನು ಇಡಿ ಅಧಿಕಾರಿಗಳು ನಿನ್ನೆ ಬಂಧಿಸಿದ್ದರು. ಇಂದು ದಿನೇಶ್ ಕುಮಾರ್ ಅವರ ಪರ ವಕೀಲರು, ಮಧ್ಯಂತರ ಜಾಮೀನಿಗಾಗಿ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ದಿನೇಶ್ ಕುಮಾರ್ ಅವರಿಗೆ ಅನಾರೋಗ್ಯವಿದ್ದು, ಈ ಹಿನ್ನೆಲೆಯಲ್ಲಿ ಜಾಮೀನು ನೀಡುವಂತೆ ಮನವಿ ಮಾಡಿದ್ದರು.
ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ, ದಿನೇಶ್ ಕುಮಾರ್ ಅವರ ಮಧ್ಯಂತರ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ. ಅಲ್ಲದೇ ದಿನೇಶ್ ಕುಮಾರ್ ಅವರನ್ನು 9 ದಿನಗಳ ಕಾಲ ಇಡಿ ಕಸ್ಟಡಿಗೆ ವಹಿಸಿ ಆದೇಶ ಹೊರಡಿಸಿದೆ.