HomeKarnatakaBIG NEWS: ಮುಡಾ ಅಕ್ರಮ ಪ್ರಕರಣ: ಸಿಬಿಐ ತನಿಖೆ ಇಲ್ಲ; ಗೃಹ ಸಚಿವ ಡಾ.ಪರಮೇಶ್ವರ್ ಸ್ಪಷ್ಟನೆ

BIG NEWS: ಮುಡಾ ಅಕ್ರಮ ಪ್ರಕರಣ: ಸಿಬಿಐ ತನಿಖೆ ಇಲ್ಲ; ಗೃಹ ಸಚಿವ ಡಾ.ಪರಮೇಶ್ವರ್ ಸ್ಪಷ್ಟನೆ

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮುಡಾ ಅಕ್ರಮ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡುವಂತೆ ಬಿಜೆಪಿ ಆಗ್ರಹ ವಿಚಾರವಾಗಿ ಪ್ರತಿಕ್ರಿಯಿಸಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಮುಡಾ ಹಗರಣವನ್ನು ಸಿಬಿಐಗೆ ವಹಿಸುವ ಪ್ರಶ್ನೆ ಇಲ್ಲ ಎಂದು ಹೇಳಿದರು.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಪರಮೇಶ್ವರ್, ಬಿಜೆಪಿಯವರು ಕೇಳುತ್ತಾರೆ ಎಂದು ಎಲ್ಲವನ್ನೂ ಸಿಬಿಐ ತನಿಖೆಗೆ ನೀಡಲು ಸಾಧ್ಯವಿಲ್ಲ. ಮುಡಾ ಅಕ್ರಮ ಪ್ರಕರಣ ಸಿಬಿಐಗೆ ಕೊಡಲು ಆಗಲ್ಲ ಎಂದು ಹೇಳಿದರು.

ಇನ್ನು ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಬಿಜೆಪಿ ಒತ್ತಾಯ ವಿಚಾರವಾಗಿ ಪ್ರತಿಕ್ರಿಯಿಸಿದ ಸಚಿವರು, ಈ ಬಗ್ಗೆ ಈಗಾಗಲೇ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಬಿಜೆಪಿಯವರು ಹೇಳುತ್ತಾರೆಂದು ಎಲ್ಲವನ್ನೂ ಸಿಬಿಐಗೆ ಕೊಟ್ಟರೆ ಇಲ್ಲೇನು ಮಾಡುವ ಹಾಗಿಲ್ಲವೇ? ಎಂದು ಪ್ರಶ್ನಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಿಜೆಪಿಯವರು ಸದನದಲ್ಲಿ ಯಾವ ವಿಚಾರ ಚರ್ಚೆಗೆ ತೆಗೆದುಕೊಳ್ಳುತ್ತಾರೆ ಗೊತ್ತಿಲ್ಲ. ಸ್ಪೀಕರ್ ಯಾವ ವಿಚಾರದ ಬಗ್ಗೆ ಪತ್ರ ಕೊಡುತ್ತಾರೋ ಗೊತ್ತಿಲ್ಲ. ಬಿಜೆಪಿಯವರಿಗೆ ನಾವೂ ಸದನದಲ್ಲಿಯೇ ಉತ್ತರ ಕೊಡುತ್ತೇವೆ ಎಂದು ಹೇಳಿದರು.

For Latest News Updates, Join Our Whatsapp Community🚩
RELATED ARTICLES

Most Popular