ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಬಿ ರಿಪೋರ್ಟ್ ಪ್ರಶ್ನಿಸಿ ಜಾರಿ ನಿರ್ದೇಶನಾಲಯ-ಇಡಿ, ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದೆ. ಅರ್ಜಿಯಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಕುಟುಂಬದ ವಿರುದ್ಧ ಆರೋಪಕ್ಕೆ ಸಾಕ್ಷಿ ಇದೆ ಎಂದು ತಿಳಿಸಿದೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಡಿರುವ ಮುಡಾ ಪ್ರಕರಣದ ದೂರುದಾರ ಸ್ನೇಹಮಯಿ ಕೃಷ್ಣ, ಮುಡಾ ಕೇಸ್ ನಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಕುಟುಂಬಕ್ಕೆ ಕೇವಲ ತಾತ್ಕಾಲಿಕ ರಿಲೀಫ್ ಅಷ್ಟೇ ಸಿಕ್ಕಿದೆ. ಈ ಪ್ರಕರಣದಲ್ಲಿ ಅವರ ಕುಟುಂಬಕ್ಕೆ ಜೈಲು ಶಿಕ್ಷೆ ಖಚಿತವಾಗಿ ಆಗುತ್ತದೆ ಎಂದಿದ್ದಾರೆ.
ಜಾರಿ ನಿರ್ದೇಶನಾಲಯ ಹೇಳಿದಂತೆ ಆರೋಪಿಗಳ ಮೇಲಿನ ಆರೋಪಗಳಿಗೆ ನನ್ನ ಬಳಿಯೂ ಸಾಕಷ್ಟು ಸಾಕ್ಷಿಗಳಿವೆ. ಈ ಪ್ರಕರಣದಲ್ಲಿ ಬಿ ರಿಪೋರ್ಟ್ ಹಾಕಿದ ಲೋಕಾಯುಕ್ತ ಅಧಿಕಾರಿಗಳಿಗೂ ಶಿಕ್ಷೆ ಕೊಡಿಸುವುದಾಗಿ ತಿಳಿಸಿದ್ದಾರೆ.

