BREAKING: ಮುಡಾದಲ್ಲಿ ಸಿಎಂ ಪ್ರಭಾವ ಬೀರಿದ್ದಕ್ಕೆ ಮತ್ತೊಂದು ಸಾಕ್ಷ್ಯ ಲಭ್ಯ: ಸಿದ್ಧರಾಮಯ್ಯ ಪತ್ನಿ ನೋಂದಣಿ ಶುಲ್ಕ ಪಾವತಿಸಿದ್ದ ತಹಶೀಲ್ದಾರ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದಲ್ಲಿ ಸಿಎಂ ಸಿದ್ಧರಾಮಯ್ಯ ಪ್ರಭಾವ ಬೀರಿದ್ದಾರೆ ಎನ್ನುವುದಕ್ಕೆ ದೂರುದಾರ ಸ್ನೇಹಮಯಿ ಕೃಷ್ಣ ಮತ್ತೊಂದು ಸಾಕ್ಷ್ಯ ನೀಡಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಈ ಕುರಿತು ಪೋಸ್ಟ್ ಹಾಕಿದ್ದಾರೆ. ಮುಖ್ಯಮಂತ್ರಿ ಪತ್ನಿ ವಿಚಾರದಲ್ಲಿ ತಹಶೀಲ್ದಾರ್ ಹಣ ಪಾವತಿಸಿದ್ದಾರೆ. ಮುದ್ರಾಂಕ ಶುಲ್ಕವನ್ನು ತಹಶೀಲ್ದಾರ್ ಅವರೇ ಪಾವತಿ ಮಾಡಿದ್ದಾರೆ ಎಂದು ಮತ್ತೊಂದು ಕ್ರಯಪತ್ರದ ಉದಾಹರಣೆ ನೀಡಿ ಆರೋಪಿಸಿದ್ದಾರೆ.

ಬೇರೆಯವರ ವಿಚಾರದಲ್ಲಿ ಆ ವ್ಯಕ್ತಿಯಿಂದ ಹಣ ಕಟ್ಟಿಸಿಕೊಳ್ಳುತ್ತಾರೆ. ಆದರೆ, ಸಿಎಂ ಪತ್ನಿ ವಿಚಾರದಲ್ಲಿ ತಹಶೀಲ್ದಾರ್ ಹಣ ಪಾವತಿಸಿದ್ದಾರೆ. ನನ್ನ ಆರೋಪಕ್ಕೆ ಇದಕ್ಕಿಂತ ಸಾಕ್ಷಿ ಬೇಕಾ ಎಂದು ಪೋಸ್ಟ್ ಹಾಕಿದ್ದಾರೆ

“ಮುಡಾ ಪ್ರಕರಣದಲ್ಲಿ ತಮ್ಮ ಪ್ರಭಾವ ಬೀರಿಲ್ಲ ಎಂದು ಹೇಳುವ ಸಿದ್ದರಾಮಯ್ಯನವರಿಗೆ, ನಿಮ್ಮ ಪ್ರಭಾವ ಬೀರಿದೆ ಎಂಬುದಕ್ಕೆ ಮತ್ತೊಂದು ಸಾಕ್ಷಿ ಕೊಡುತ್ತಿದ್ದೇನೆ ! ಕ್ರಯಪತ್ರ ನೊಂದಣಿ ಮಾಡಿಸಿಕೊಳ್ಳುವವರು ನೊಂದಣಿಗೆ ಸಂಬಂಧಿಸಿದ ಶುಲ್ಕಗಳನ್ನು ಪಾವತಿ ಮಾಡಬೇಕು, ಅದೇ ರೀತಿ ಎನ್.ಮಂಜುನಾಥ್ ರವರು ಮುದ್ರಾಂಕ ಶುಲ್ಕ ಪಾವತಿ ಮಾಡಿದ್ದಾರೆ. ಆದರೆ ಸಿದ್ದರಾಮಯ್ಯನವರ ಪತ್ನಿ ಶ್ರೀಮತಿ ಪಾರ್ವತಿರವರ ಕ್ರಯಪತ್ರ ಗಮನಿಸಿ, ಮುಡಾದ ವಿಶೇಷ ತಹಸೀಲ್ದಾರ್ ಮುದ್ರಾಂಕ ಶುಲ್ಕ ಪಾವತಿ ಮಾಡಿದ್ದಾರೆ ಎಂಬುದು ಖಚಿತವಾಗಿ ತಿಳಿದುಬರುತ್ತದೆ !  ನನ್ನ ಆರೋಪಕ್ಕೆ ಇದಕ್ಕಿಂತ ಸಾಕ್ಷಿ ಬೇಕ ? ಸಿದ್ದರಾಮಯ್ಯ ರಾಜ್ಯದ ಜನತೆಗೆ ಉತ್ತರಿಸುವರೆ ?” ಎಂದು ಸ್ನೇಹಮಯಿ ಕೃಷ್ಣ ಪ್ರಶ್ನಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read