HomeKarnatakaBIG NEWS: ಮುಡಾ ಕಚೇರಿಯಲ್ಲಿ ಮುಂದುವರಿದ ED ದಾಳಿ; ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ

BIG NEWS: ಮುಡಾ ಕಚೇರಿಯಲ್ಲಿ ಮುಂದುವರಿದ ED ದಾಳಿ; ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾ ಕಚೇರಿಯಲ್ಲಿ ಜಾರಿ ನಿರ್ದೇಶನಾಲಯ-ಇಡಿ ಅಧಿಕಾರಿಗಳ ದಾಳಿ ಮುಂದುವರೆದಿದೆ. ಸತತ ಎರಡನೇ ದಿನವಾದ ಇಂದು ಕೂಡ ಇಡಿ ಅಧಿಕಾರಿಗಳು ಮುಡಾ ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.

ನಿನ್ನೆ ಶುಕ್ರವಾರ ರಾತ್ರಿ 10ಗಂಟೆಯವರೆಗೂ ದಾಖಲೆಗಳನ್ನು ಪರಿಶೀಲಿಸಿ ಹೊರಟಿದ್ದ ಇಡಿ ಅಧಿಕಾರಿಗಳು ಇಂದು ಬೆಳಿಗ್ಗೆ 10ಗಂಟೆಗೆ ಮತ್ತೆ ಮುಡಾ ಕಚೇರಿಗೆ ಆಗಮಿಸಿ ಪರಿಶೀಲನೆ ಮುಂದುವರೆಸಿದ್ದಾರೆ. ಇಡಿ ಅಧಿಕಾರಿಗಳ ದಾಳಿ ಹಿನ್ನೆಲೆಯಲ್ಲಿ ಮುಡಾ ಕಚೇರಿಯಲ್ಲಿ ಸಾರ್ವಜನಿಕರ ಕೆಲಸಗಳಿಗೆ ಬ್ರೇಕ್ ಹಾಕಲಾಗಿದೆ.

ಮುಡಾ ಅಧಿಕಾರಿಗಳು ಇಡಿ ತನಿಖೆಗೆ ಸಹಕರಿಸುತ್ತಿರುವ ಹಿನ್ನೆಲೆಯಲ್ಲಿ ದೈನಂದಿನ ಕಾರ್ಯಚಟುವಟಿಕೆಗಳು ನಡೆಯುತ್ತಿಲ್ಲ. ಸಾರ್ವಜನಿಕರಿಗೆ ಮುಡಾ ಕಚೇರಿ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular