HomeKarnatakaBIG NEWS: ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ದೂರು

BIG NEWS: ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ದೂರು

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ದೂರು ನೀಡಲಾಗಿದೆ.

ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಸಿಎಂ ಸಿದ್ದರಾಮಯ್ಯ ಹಾಗೂ ಕುಟುಂಬದ ವಿರುದ್ಧ ಮತ್ತೊಂದು ದೂರು ಸಲ್ಲಿಕೆ ಮಾಡಿದ್ದಾರೆ.

ರಾಜ್ಯಪಾಲರ ಹೆಸರಿನಲ್ಲಿ ಅಕ್ರಮ ಪರಿತ್ಯಾಜನ ಪತ್ರ ನೋದಣಿ ಮಾಡಿಕೊಳ್ಳಲಾಗಿದೆ ಎಂದು ಆರೋಪಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರಿಂದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಪ್ರಥಮದರ್ಜೆ ಸಹಾಯಕ ಕೆ.ಸಿ.ಉಮೇಶ್ ಎಂಬುವವರು ಪರಿತ್ಯಾಜನ ಪತ್ರ ನೋಂದಣಿ ಮಾಡಿಸಿಕೊಂಡಿದ್ದಾರೆ. ಕೆಸರೆ ಗ್ರಾಮದ ಸರ್ವೆ ನಂ.464ರ 3.16 ಎಕರೆ ಜಮೀನು ಸಂಬಂಧ ಪರಿತ್ಯಾಜನ ಪತ್ರ ನೋಂದಣಿ ಮಾಡಲಾಗಿದೆ. ನಿಮ್ಮ ಹೆಸರಲ್ಲಿ ಪರಿತ್ಯಾಜನ ಪತ್ರ ನೋಂದಣಿಯಾಗಿದೆ. ಹೀಗಾಗಿ ಕೂಡಲೇ ಉಮೇಶ್ ಹಾಗೂ ಇತರೆ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular