HomeKarnatakaBIG NEWS: ಮುಡಾ ದಾಖಲೆಗಳನ್ನು ಸುಟ್ಟು ಹಾಕಿದ ಸಚಿವರು: ಭೈರತಿ ಸುರೇಶ್ ರನ್ನು ತಕ್ಷಣ ಬಂಧಿಸಿ:...

BIG NEWS: ಮುಡಾ ದಾಖಲೆಗಳನ್ನು ಸುಟ್ಟು ಹಾಕಿದ ಸಚಿವರು: ಭೈರತಿ ಸುರೇಶ್ ರನ್ನು ತಕ್ಷಣ ಬಂಧಿಸಿ: ಶೋಭಾ ಕರಂದ್ಲಾಜೆ ಆಗ್ರಹ

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಹಾಗೂ ಸಚಿವ ಬೈರತಿ ಸುರೇಶ್ ವಿರುದ್ಧ ವಾಗ್ದಾಳಿ ನಡೆಸಿರುವ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಇಬ್ಬರೂ ತಕ್ಷಣ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವೆ ಶೋಭಾ ಕರಂದ್ಲಾಜೆ, ಸಚಿವ ಬೈರತಿ ಸುರೇಶ್, ಮುಡಾ ಫೈಲ್ ಗಳನ್ನು ಸುಟ್ಟು ಹಾಕಿದ್ದಾರೆ. ತನಿಖಾ ಸಂಸ್ಥೆಗಳು ಅವರನ್ನು ಕೂಡಲೇ ಬಂಧಿಸಬೇಕು ಎಂದರು.

ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ರಕ್ಷಿಸಲು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಮುಡಾ ದಾಖಲೆಗಳನ್ನು ಬೆಂಗಳೂರಿಗೆ ತಂದು ಸುಟ್ಟು ಹಾಕಿದ್ದಾರೆ. ಈ ಬಗ್ಗೆ ನಮಗೆ ಮಾಹಿತಿ ಬಂದಿದೆ. ಹೀಗಾಗಿ ಕೂಡಲೇ ಸಚಿವ ಬೈರತಿ ಸುರೇಶ್ ಅವರನ್ನು ಬಂಧಿಸಿ ವಿಚಾರಣೆ ನಡೆಸಬೇಕು ಎಂದು ಆಗ್ರಹಿಸಿದರು. ಬೈರತಿ ಸುರೇಶ್ ಅವರನ್ನು ಬಂಧಿಸಿ ತನಿಖೆ ನಡೆಸಿದರೆ ಎಲ್ಲಾ ಮಾಹಿತಿಗಳು ಹೊರಬರುತ್ತದೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮುಡಾ ಫೈಲ್ ಎಲ್ಲಿ ಹೋಯಿತು? ಎಲ್ಲಿ ದಾಖಲೆಗಳನ್ನು ಸುಟ್ಟು ಹಾಕಿದ್ದಾರೆ? ಎಲ್ಲಾ ವಿಷಯಗಳು ಬೈರತಿ ಸುರೇಶ್ ಅವರ ಬಂಧನದಿಂದ ಹೊರಬರಲಿದೆ ಎಂದು ತಿಳಿಸಿದ್ದಾರೆ.

 

For Latest News Updates, Join Our Whatsapp Community🚩
RELATED ARTICLES

Most Popular