HomeKarnatakaBREAKING NEWS: ಮುಡಾ ಆಯ್ತು ಈಗ ಸಿಎ ಸೈಟ್ ಸರದಿ: ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ...

BREAKING NEWS: ಮುಡಾ ಆಯ್ತು ಈಗ ಸಿಎ ಸೈಟ್ ಸರದಿ: ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು: ಸರ್ಕಾರಕ್ಕೆ ವಿವರಣೆ ಕೇಳಿದ ರಾಜ್ಯಪಾಲರು

ಬೆಂಗಳೂರು: ಮುಡಾ ನಿವೇಶನ ಹಂಚಿಕೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ಬೆನ್ನಲ್ಲೇ ಇದೀಗ ಸಿಎ ಸೈಟ್ ಹಂಚಿಕೆಯಲ್ಲಿ ಅಕ್ರಮ ಆರೋಪ ಕೇಳಿಬಂದಿದೆ. ಈ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು ನೀಡಿದೆ.

ಸಿಎ ಸೈಟ್ ಹಂಚಿಕೆಯಲ್ಲಿ ಅಕ್ರಮವೆಸಗಲಾಗಿದೆ ಎಂದು ಆರೋಪಿಸಿ ಬಿಜೆಪಿ ನಾಯಕ ಛಲವಾದಿ ನಾರಾಯಣಸ್ವಾಮಿ ರಾಜ್ಯಪಾಲರಿಗೆ ದೂರು ನೀಡಿದ್ದಾರೆ. ಈ ಬಗ್ಗೆ ವಿವರಣೆ ನೀಡುವಂತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ.

ಕೆಐಎ ಡಿಬಿಯಿಂದ ಸಿದ್ಧಾರ್ಥ ಟ್ರಸ್ಟ್ ಗೆ ಹಂಚಿಕೆಯಾಗಿದ್ದ ನಿವೇಶನ ವಿಚಾರವಾಗಿ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು ನೀಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular