ಬೆಂಗಳೂರು : ಮುಡಾ ಹಗರಣ ಕೇಸ್ ಸಂಬಂಧ ಸಿಎಂ ಸಿದ್ದರಾಮಯ್ಯಗೆ ಇಂದು ಬಿಗ್ ಡೇ ಆಗಿದೆ. ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣ ಪ್ರಕರಣದಲ್ಲಿ ಲೋಕಾಯುಕ್ತ ಕೊಟ್ಟ ಕ್ಲೀನ್ ಚಿಟ್ ಗೆ ನ್ಯಾಯಾಲಯ ಇಂದು ತೀರ್ಪು ಪ್ರಕಟಿಸಲಿದೆ.
ಲೋಕಾಯುಕ್ತ ಸಲ್ಲಿಸಿದ್ದ ಬಿ ರಿಪೋರ್ಟ್ ಪ್ರಶ್ನಿಸಿ ಸ್ನೇಹಮಯಿ ಕೃಷ್ಣ ಹೈಕೋರ್ಟ್ ಮೆಟ್ಟಿಲೇರಿದ್ದರು. ವಾದ ಆಲಿಸಿದ ಕೋರ್ಟ್ ಆದೇಶ ಕಾಯ್ದಿರಿಸಿತ್ತು. ನ್ಯಾಯಾಲಯ ಬಿ ರಿಪೋರ್ಟ್ ಒಪ್ಪಿದ್ರೆ ಸಿಎಂ ಸಿದ್ದರಾಮಯ್ಯ ಕುಟುಂಬಕ್ಕೆ ಬಿಗ್ ರಿಲೀಫ್ ಸಿಗಲಿದೆ. ಒಂದು ವೇಳೆ ಒಪ್ಪದೇ ಇದ್ರೆ ಸಂಕಷ್ಟ ಎದುರಾಗಲಿದೆ.
ಲೋಕಾಯುಕ್ತದಿಂದ ಇಂದು ಪ್ರಕರಣದ ಅಂತಿಮ ವರದಿ ಸಲ್ಲಿಕೆಯಾಗಲಿದ್ದು, ಅಂತಿಮ ವರದಿ ಸಲ್ಲಿಕೆ ಬಳಿಕ ಬಿ ರಿಪೋರ್ಟ್ ಆದೇಶ ಹೊರಬೀಳಲಿದೆ. ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರು ಮುಡಾದಿಂದ ಪಡೆದಿದ್ದ 14 ಸೈಟ್ ಗಳ ಬಗ್ಗೆ ತನಿಖೆ ನಡೆಸಿದ್ದ ಲೋಕಾಯುಕ್ತ ಬಿ ರಿಪೋರ್ಟ್ ಸಲ್ಲಿಸಿತ್ತು.

