HomeKarnatakaBIG NEWS: ಬಿಜೆಪಿ ಅವಧಿಯಲ್ಲಿ ಅಕ್ರಮವಾಗಿ ಮುಡಾ ಸೈಟ್ ಹಂಚಿಕೆ: ಶೀಘ್ರದಲ್ಲೇ ಪಟ್ಟಿ ಬಿಡುಗಡೆ ಎಂದ...

BIG NEWS: ಬಿಜೆಪಿ ಅವಧಿಯಲ್ಲಿ ಅಕ್ರಮವಾಗಿ ಮುಡಾ ಸೈಟ್ ಹಂಚಿಕೆ: ಶೀಘ್ರದಲ್ಲೇ ಪಟ್ಟಿ ಬಿಡುಗಡೆ ಎಂದ ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿಅಕ್ರಮವಾಗಿ ಮುಡಾ ನಿವೇಶನ ಹಂಚಿಕೆ ಮಾಡಲಾಗಿದ್ದು, ಈ ನಿವೇಶನಗಳನ್ನು ಬಿಜೆಪಿಯವರೇ ಹಂಚಿಕೆ ಮಾಡಿಕೊಂಡಿದ್ದಾರೆ. ಶೀಘ್ರದಲ್ಲೇ ಆ ಪಟ್ಟಿ ಬಿಡುಗಡೆ ಮಾಡುತ್ತೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗರರೊಂದಿಗೆ ಮತನಡಿದ ಡಿಸಿಎಂ, ಎರಡು ವರ್ಷಗಳ ಹಿಂದೆಯೇ ಬಿಜೆಪಿ ಆಡಳಿತಾವಧಿಯಲ್ಲಿ ಮುಡಾ ನಿವೇಶನಗಳನ್ನು ಹಂಚಿಕೆ ಮಾಡಲಾಗಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿತ್ತು. ಬಿಜೆಪಿಯವರು ಸದನ ಪ್ರಾರಂಭದ ದಿನವೇ ಈ ವಿಚಾರ ಪ್ರಸ್ತಾಪ ಮಾಡಬಹುದಿತ್ತಲ್ಲವೇ? ಅವರ ಹಗರಣಗಳು ಈಗ ಹೊರಗೆ ಬರುವ ಭಯದಿಂದ ಈಗ ಮಾತನಾಡುತ್ತಿದ್ದಾರೆ ಎಂದು ತಿರುಗೇಟು ನೀಡಿದರು.

ನಿಗಮ ಮಂಡಳಿಗಳಲ್ಲಿಆಗಿರುವ ಅಕ್ರಮಗಳ ಬಗ್ಗೆ ಚರ್ಚೆಗೆ ಅವಕಾಶ ಕಲ್ಪಿಸಿದ್ದೆವು. ಬಿಜೆಪಿಯವರು ತಮಗೆ ಏನೇನು ಬೇಕೋ ಅದನ್ನು ಹೇಳಿದರು. ಆದರೆ ಮುಖ್ಯಮಂತ್ರಿಗಳಿಂದ ಉತ್ತರ ಪಡೆಯಲು ಅವಕಾಶವನ್ನೇ ನೀಡಲಿಲ್ಲ. ಮುಖ್ಯಮಂತ್ರಿಗಳು ಲಿಖಿತ ರೂಪದಲ್ಲಿ ಬಿಜೆಪಿಯವರ ಕಾಲದ ನಿಗಮಗಳಲ್ಲಿನ ಅಕ್ರಮಗಳನ್ನು ಬಿಚ್ಚಿಟ್ಟರು. ಬಿಜೆಪಿಯವರು ತಮ್ಮ ಕಾಲದಲ್ಲಿನ ಹಗರಣ ಬಹಿರಂಗವಾಗಬಾರದು ಎಂಬ ಕಾರಣಕ್ಕೆ ಮುಖ್ಯಮಂತ್ರಿಗಳ ಉತ್ತರಕ್ಕೆ ಅವಕಾಶ ನೀಡಲಿಲ್ಲ. ಈ ಅಕ್ರಮಗಳ ಬಗ್ಗೆ ನಮ್ಮ ಸರ್ಕಾರ ತನಿಖೆಗೆ ಆದೇಶ ನೀಡಿದೆ ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

“ವಾಲ್ಮೀಕಿ ನಿಗಮದಲ್ಲಿ ಅಧಿಕಾರಿಗಳು ಅಕ್ರಮ ಮಾಡಿದ್ದು, ಕಾನೂನು ಕ್ರಮ ಕೈಗೊಳ್ಳಲಾಗುವುದು. ಉಪ್ಪು ತಿಂದವನು ನೀರು ಕುಡಿಯುತ್ತಾರೆ. ಇದಕ್ಕೆ ನಮ್ಮ ಅಭ್ಯಂತರವಿಲ್ಲ. ಬಿಜೆಪಿಯವರು ಈಗ ಮೂಡಾ ನಿವೇಶನದ ಬಗ್ಗೆ ಗದ್ದಲ ಎಬ್ಬಿಸುತ್ತಿದ್ದಾರೆ. ನಾವು ಅವರ ಕಾಲದಲ್ಲಿ ಹೇಗೆ ನಿವೇಶನ ಹಂಚಿಕೆ ಮಾಡಿದ್ದಾರೆ ಎಂಬುದನ್ನು ನಾವು ಹೊರಗೆ ತರುತ್ತಿದ್ದೇವೆ. ಈ ವಿಚಾರದಲ್ಲಿ ಮುಖ್ಯಮಂತ್ರಿಗಳು ತನಿಖೆಗೆ ಆದೇಶಿಸಿದ್ದು, ವಿರೋಧ ಪಕ್ಷಗಳ ಬಳಿ ದಾಖಲೆ ಇದ್ದರೆ ಅದನ್ನು ತನಿಖಾಧಿಕಾರಿಗಳಿಗೆ ನೀಡಲಿ ಎಂದು ಹೇಳಿದರು.

ಆ ಜಮೀನು ಖರೀದಿ ಮಾಡಿದ್ದು, ಅದನ್ನು ದಾನಪತ್ರವಾಗಿ ನೀಡಿದ್ದು ನಿಜವಲ್ಲವೇ? ಅದನ್ನು ಅಕ್ರಮವಾಗಿ ಮೂಡಾದವರು ಬಳಸಿಕೊಂಡಿದ್ದಾರೆ. ಅದಕ್ಕೆ ಪರಿಹಾರ ನೀಡಿದ್ದಾರೆ. ಇದರಲ್ಲಿ ಅವ್ಯವಹಾರ ಏನಿದೆ? ಇಲ್ಲಿ ಅವ್ಯವಹಾರ ನಡೆದಿದ್ದರೆ ಅದು ಬಿಜೆಪಿಯವರ ಕಾಲದಲ್ಲಿ ಆಗಿದೆ ಎಂದರು.

For Latest News Updates, Join Our Whatsapp Community🚩
RELATED ARTICLES

Most Popular