ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ- ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ-ಇಡಿ ನಡೆಸುತ್ತಿರುವ ತನಿಖೆಯಲ್ಲಿ ಹಲವು ಮಹತ್ವದ ಮಾಹಿತಿಗಳು ಬಯಲಾಗಿವೆ.
ಮುಡಾ ಹಗರಣದ ಸುತ್ರಧಾರಿಯೇ ಮಾಜಿ ಆಯುಕ್ತ ದಿನೇಶ್ ಕುಮಾರ್ ಎಂಬುದು ತನಿಖೆಯಿಂದ ತಿಳಿದುಬಂದಿದೆ. ಮುಡಾ ಮಜೈ ಆಯುಕ್ತ ದಿನೇಶ್ ಕುಮಾರ್ ತನ್ನ ಅಧಿಕಾರಾವಧಿಯಲ್ಲಿ 140 ಕೋಟಿ ಮೌಲ್ಯದ 283 ನಿವೇಶನಗಳನ್ನು ಅಕ್ರಮವಾಗಿ ಮಂಜೂರು ಮಾಡಿದ್ದರು.
ಹೀಗೆ ಅಕ್ರಮವಾಗಿ ನಿವೇಶನ ಮಂಜೂರು ಮಾಡಲು 22.47 ಕೋಟಿ ಲಂಚ ಪಡೆದಿದ್ದರು ಎಂಬುದು ಇಡಿ ತನಿಖೆಯಿಂದ ಬಹಿರಂಗವಾಗಿದೆ. ಅಕ್ರಮವಾಗಿ ನಿವೇಶನ ಹಂಚಿಕೆ ಮಾಡಲು ಅವರು ನಗದು, ಚರ, ಸ್ಥಿರ ಆಸ್ತಿಗಳ ರೂಪದಲ್ಲಿ ಲಂಚ ಪಡೆದಿದಾರೆ ಎಂದು ತಿಳಿದುಬಂದಿದೆ.
