HomeLatest NewsMUDA Scam: ಮುಡಾ ಹಗರಣ: ಅಕ್ರಮವಾಗಿ ನಿವೇಶನ ಹಂಚಿಕೆಗೆ 22.47 ಕೋಟಿ ಲಂಚ ಪಡೆದಿದ್ದ ಮಾಜಿ...

MUDA Scam: ಮುಡಾ ಹಗರಣ: ಅಕ್ರಮವಾಗಿ ನಿವೇಶನ ಹಂಚಿಕೆಗೆ 22.47 ಕೋಟಿ ಲಂಚ ಪಡೆದಿದ್ದ ಮಾಜಿ ಆಯುಕ್ತ ದಿನೇಶ್ ಕುಮಾರ್

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ- ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ-ಇಡಿ ನಡೆಸುತ್ತಿರುವ ತನಿಖೆಯಲ್ಲಿ ಹಲವು ಮಹತ್ವದ ಮಾಹಿತಿಗಳು ಬಯಲಾಗಿವೆ.

ಮುಡಾ ಹಗರಣದ ಸುತ್ರಧಾರಿಯೇ ಮಾಜಿ ಆಯುಕ್ತ ದಿನೇಶ್ ಕುಮಾರ್ ಎಂಬುದು ತನಿಖೆಯಿಂದ ತಿಳಿದುಬಂದಿದೆ. ಮುಡಾ ಮಜೈ ಆಯುಕ್ತ ದಿನೇಶ್ ಕುಮಾರ್ ತನ್ನ ಅಧಿಕಾರಾವಧಿಯಲ್ಲಿ 140 ಕೋಟಿ ಮೌಲ್ಯದ 283 ನಿವೇಶನಗಳನ್ನು ಅಕ್ರಮವಾಗಿ ಮಂಜೂರು ಮಾಡಿದ್ದರು.

ಹೀಗೆ ಅಕ್ರಮವಾಗಿ ನಿವೇಶನ ಮಂಜೂರು ಮಾಡಲು 22.47 ಕೋಟಿ ಲಂಚ ಪಡೆದಿದ್ದರು ಎಂಬುದು ಇಡಿ ತನಿಖೆಯಿಂದ ಬಹಿರಂಗವಾಗಿದೆ. ಅಕ್ರಮವಾಗಿ ನಿವೇಶನ ಹಂಚಿಕೆ ಮಾಡಲು ಅವರು ನಗದು, ಚರ, ಸ್ಥಿರ ಆಸ್ತಿಗಳ ರೂಪದಲ್ಲಿ ಲಂಚ ಪಡೆದಿದಾರೆ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular