HomeKarnatakaED ಸಮನ್ಸ್ ಗೆ ಹೈಕೋರ್ಟ್ ತಡೆ: ಸಚಿವ ಭೈರತಿ ಸುರೇಶ್ ಹೇಳಿದ್ದೇನು?

ED ಸಮನ್ಸ್ ಗೆ ಹೈಕೋರ್ಟ್ ತಡೆ: ಸಚಿವ ಭೈರತಿ ಸುರೇಶ್ ಹೇಳಿದ್ದೇನು?

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಸಚಿವ ಭೈರತಿ ಸುರೇಶ್ ಗೆ ನೀಡಿದ್ದ ನೋಟಿಸ್ ಗೆ ಹೈಕೋರ್ಟ್ ತಡೆ ನೀಡಿರುವ ವಿಚಾರವಾಗಿ ಸ್ವತಃ ಸಚಿವರು ಪ್ರತಿಕ್ರಿಯೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಭೈರತಿ ಸುರೇಶ್, ಈ ಕೇಸ್ ನಲ್ಲಿ ನನ್ನದಾಗಲಿ, ಸಿಎಂ ಸಿದ್ದರಾಮಯ್ಯ ಪತ್ನಿಯದ್ದಾಗಲಿ ಯಾವುದೇ ಪಾತ್ರವಿಲ್ಲ. ನಾನು ಬಹಳ ಕ್ಲೀಯರ್ ಆಗಿದ್ದೇನೆ. ನಮ್ಮ ಪಾತ್ರ ಇಲ್ಲ ಎಂದು ಒಪ್ಪಿಕೊಂಡು ಕೋರ್ಟ್ ಸ್ಟೇ ನೀಡಿದೆ. ಹೈಕೋರ್ಟ್ ನ್ಯಾಯಮೂರ್ತಿಗಳು ಕೇಸ್ ಮುಂದಕ್ಕೆ ಹಾಕಿದ್ದಾರೆ ಎಂದರು.

ನ್ಯಾಯಾಲಯದ ಆದೇಶವನ್ನು ನಾವು ಪಾಲಿಸುತ್ತೇವೆ. ನ್ಯಾಯಾಂಗ, ಸಂವಿಧಾನದ ಮೇಲೆ ನಾವು ನಂಬಿಕೆ ಇಟ್ಟುಕೊಂಡಿದ್ದೇವೆ. ನನಗೆ ಇಡಿ ಅಧಿಕಾರಿಗಳು ನೋಟಿಸ್ ನೀಡಿದಾಗ ಅಚ್ಚರಿಯಾಯಿತು. ಹಗರಣ ನಡೆದಾಗ ನಾನು ಮಂತ್ರಿನೂ ಅಲ್ಲ, ಸೈಟನ್ನೂ ಕೊಟ್ಟಿಲ್ಲ. ಸೈಟ್ ಹಂಚಿಕೆ ಗೊಂದಲ ಆದಮೇಲೆ ವಾಪಾಸ್ ಕೊಟಿದ್ದಾರೆ. ಇದೆಲ್ಲ ನ್ಯಾಯಮೂರ್ತಿಗಳಿಗೆ ಮನದಟ್ಟಾಗಿದೆ. ಹಾಗಾಗಿ ಇಡಿ ಸಮನ್ಸ್ ಗೆ ಸ್ಟೇ ನೀಡಿದ್ದಾರೆ ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular