ಮುಡಾ ಹಗರಣ: ದಾಖಲೆ ಪರಿಶೀಲಿಸಿದ ಇಡಿ; ಸಿಎಂ ಸಿದ್ದರಾಮಯ್ಯ; ಪತ್ನಿ ಪಾರ್ವತಿ ವಿಚಾರಣೆ ನಡೆಸುವ ಸಾಧ್ಯತೆ

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ- ಮುಡಾ ಕಚೇರಿ ಹಾಗೂ ಮುಡಾ ಪ್ರಕರಣದ ಎ4 ದೇವರಾಜು ಮನೆ ಮೇಲೆದಾಳಿ ನಡೆಸಿ, ದಾಖಲೆಗಳನ್ನು ಪರಿಶೀಲಿಸಿರುವ ಇಡಿ ಅಧಿಕಾರಿಗಳು ಹಲವು ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ.

ತಡರಾತ್ರಿವರೆಗೂ ಮುಡಾ ಕಚೇರಿಯಲ್ಲಿ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಗೆ ಹಂಚಿಕೆಯಾಗಿದ್ದ 14 ನಿವೇಶನ ಹಾಗೂ ಕೆಸರೆ ಗ್ರಾಮದ ಸರ್ವೆ ನಂಬರ್ 464ರ ಜಮೀನಿನ ದಾಖಲೆಗಳನ್ನು ಇಡಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.

ಮುಡಾ ಆಯುಕ್ತರಿಗೆ ಇಡಿ ಅಧಿಕಾರಿಗಳು 41 ಪ್ರಶ್ನೆಗಳನ್ನು ಕೇಳಿದ್ದಾರೆ ಎಂದು ತಿಳಿದುಬಂದಿದೆ. ಇನ್ನೊಂದೆಡೆ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಸಿಎಂ ಸಿದ್ದರಾಮಯ್ಯ ಹಾಗೂ ಪತ್ನಿ ಪಾರ್ವತಿ ಅವರನ್ನೂ ವಿಚಾರಣೆ ನಡೆಸುವ ಸಾಧ್ಯತೆ ಇದೆ ಎನ್ನಲಾಗಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read