HomeKarnatakaBIG NEWS: ನಾಪತ್ತೆಯಾಗಿದ್ದ ಮುಡಾ ಮಾಜಿ ಆಯುಕ್ತ ಪ್ರತ್ಯಕ್ಷ: ಇಡಿ ವಿಚಾರಣೆಗೆ ಹಾಜರ್

BIG NEWS: ನಾಪತ್ತೆಯಾಗಿದ್ದ ಮುಡಾ ಮಾಜಿ ಆಯುಕ್ತ ಪ್ರತ್ಯಕ್ಷ: ಇಡಿ ವಿಚಾರಣೆಗೆ ಹಾಜರ್

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ-ಇಡಿ ದಾಳಿ ವೇಳೆ ನಾಪತ್ತೆಯಾಗಿದ್ದ ಮುಡಾ ಮಾಜಿ ಆಯುಕ್ತ ದಿಬೇನ್ ಕುಮಾರ್ ಪ್ರತ್ಯಕ್ಷರಾಗಿದ್ದಾರೆ.

ಇಡಿ ಅಧಿಕಾರಿಗಳು ದಾಳಿ ನಡೆಸುತ್ತಿದ್ದಂತೆ ನಾಪತ್ತೆಯಾಗಿದ್ದ ದಿನೇಶ್ ಕುಮಾರ್ ಇಂದು ಪ್ರತ್ಯಕ್ಷವಾಗಿದ್ದು, ಬೆಂಗಳೂರಿನ ಶಾಂತಿನಗರದಲ್ಲಿರುವ ಇಡಿ ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ.

ಅ.28ರಂದು ಮುಡಾ ಮಾಜಿ ಆಯುಕ್ತ ದಿನೇಶ್ ಕುಮಾರ್ ಅವರ ಬೆಂಗಳೂರಿನ ನಿವಾಸದ ಮೇಲೆ ಇಡಿ ಅಧಿಕಾರಿಗಳು ದಾಳಿ ಮಾಡಿದ್ದರು. ಈ ವೇಳೆ ವಾಕಿಂಗ್ ಮಾಡುತ್ತಿದ್ದ ದಿನೇಶ್ ಕುಮಾರ್, ಮನೆ ಮೇಲೆ ದಾಳಿ ನಡೆದ ಸುದ್ದಿ ತಿಳಿಯುತ್ತಿದ್ದಂತೆ ಎಸ್ಕೇಪ್ ಆಗಿದ್ದರು. ವಿಚಾರಣೆಗೆ ಹಾಜರಾಗುವಂತೆ ಇಡಿ ಅಧಿಕಾರಿಗಳು ಮನೆಗೆ ನೋಟಿಸ್ ಅಂಟಿಸಿದ್ದರು. ಇದೀಗ ಇಡಿ ಕಚೇರಿಯಲ್ಲಿ ದಿನೇಶ್ ಕುಮಾರ್ ಪ್ರತ್ಯಕ್ಷವಾಗಿದ್ದು, ವಿಚಾರಣೆಗೆ ಹಾಜರಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular