BIG NEWS: ಮುಡಾ ಹಗರಣ: ಜೆಡಿಎಸ್ ಶಾಸಕ ಜಿ.ಟಿ. ದೇವೇಗೌಡ ವಿರುದ್ಧ ಲೋಕಾಯುಕ್ತ, ಇಡಿಗೆ ದೂರು

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾದಲ್ಲಿ ನಡೆದಿದೆ ಎನ್ನಲಾದ ನಿವೇಶನ ಹಂಚಿಕೆಯಲ್ಲಿ ಅಕ್ರಮ ಪ್ರಕರಣ ಸಂಬಂಧ ಇದೀಗ ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ವಿರುದ್ಧ ದೂರು ದಾಖಲಾಗಿದೆ.

ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಶಾಸಕ ಜಿ.ಟಿ.ದೇವೇಗೌಡ ವಿರುದ್ಧ ಲೋಕಾಯುಕ್ತ ಹಾಗು ಇಡಿಗೆ ದೂರು ನೀಡಿದ್ದಾರೆ. ಸಹೋದರಿಯ ಮಗ ಮಹೇಂದ್ರ ಹೆಸರಲ್ಲಿ ಬೇನಾಮಿ ಪರಿಹಾರ ಪಡೆದಿದ್ದಾರೆ ಎಂದು ಆರೋಪಿಸಿದ್ದಾರೆ.

ದೇವನೂರು ಗ್ರಾಮದ ಸರ್ವೆ ನಂ.81/2ರಲ್ಲಿ 2.22 ಎಕರೆ ಜಮೀನನ್ನು ಖರೀದಿಸಿದ್ದು, ಜಮೀನಿಗೆ ಪರಿಹಾರ ನೀಡಿಲ್ಲ ಎಂಬಂತೆ 50:50 ಅನುಮಾಪತದಲ್ಲಿ ಅಕ್ರಮವಗಿ 19 ನಿವೇಶನಗಳನ್ನು ಪಡೆದುಕೊಂಡಿದ್ದಾರೆ. ಈ ಬಗ್ಗೆ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು ಎಂದು ಮೈಸೂರು ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ. ಜೊತೆಗೆ ಒಂದು ಪ್ರತಿಯನ್ನು ಜಾರಿ ನಿರ್ದೇಶನಾಲಯಕ್ಕೂ ಸಹ ಸಲ್ಲಿಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read