BIG NEWS: ಮುಡಾದಲ್ಲಿ 5000 ಕೋಟಿ ಹಗರಣ ನಡೆದಿದೆ: ಇಡಿಗೆ ದೂರು: ಆರ್ ಟಿಐ ಕಾರ್ಯಕರ್ತ ಗಂಗರಾಜು ಆರೋಪ

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಕಾಕರ-ಮುಡಾದಲ್ಲಿ 5000 ಕೋಟಿ ಹಗರಣ ನಡೆದಿದೆ ಎಂದು ಆರ್ ಟಿಐ ಕಾರ್ಯಕರ್ತ ಗಂಗರಾಜು ಆರೊಪಿಸಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಗಂಗರಾಜು, ಮುಡಾದಲ್ಲಿ 5 ಸಾವಿರ ಕೋಟಿ ರೂಪಾಯಿಗೂ ಅಧಿಕ ಅಕ್ರಮ ನಡೆದಿದೆ. ಈ ಬಗ್ಗೆ ಜಾರಿ ನಿರ್ದೇಶನಾಲಯ-ಇಡಿಗೆ ದೂರು ನೀಡುತ್ತೇನೆ ಎಂದಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರದ್ದು 20-30 ಕೋಟಿ ರೂಪಾಯಿ ಹಗರಣ ಇರಬಹುದು ಅಷ್ಟೇ. ಆದರೆ ಅದನ್ನು ಬಿಟ್ಟು 5 ಸಾವಿರ ಕೊಟಿಗೂ ಹೆಚ್ಚು ಅಕ್ರಮ ನಡೆದಿದೆ. ಮುಡಾದ ಎಲ್ಲಾ ವಿಭಾಗದ ಸಿಬ್ಬಂದಿ ಹಾಗೂ ಅಧಿಕಾರಿಗಳ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.

ಕೇವಲ 50:50 ನಿವೇಶನ ಮಾತ್ರವಲ್ಲ ಇತರ ನಿವೇಶನ ಹಂಚಿಕೆಯಲ್ಲಿಯೂ ಅಕ್ರಮವಾಗಿದೆ ರದ್ದಾದ ನಿವೇಶನಗಳನ್ನು ಹಂಚಿಕೆ ಮಾಡಿ ಹಣ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read