HomeKarnatakaBIG NEWS: ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ

BIG NEWS: ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮತ್ತೆ ಒಂದು ವಾರಕಾಲ ಹೈಕೋರ್ಟ್ ರಿಲೀಫ್ ನೀಡಿದೆ. ಸಿಎಂ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಮತ್ತೆ ಮುಂದೂಡಿದೆ.

ಮುಡಾ ಹಗರಣ ಸಂಬಂಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಕ್ರಮ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದು, ಅರ್ಜಿ ವಿಚಾರಣೆ ಕೈಗೊಂಡಿರುವ ಹೈಕೋರ್ಟ್ ಏಕಸದಸ್ಯ ಪೀಠ, ಸುದೀರ್ಘ ವಾದ-ಪ್ರತಿವಾದ ಆಲಿಸಿತು. ಇಂದು ಪ್ರಮುಖವಾಗಿ ದೂರುದಾರ ಸ್ನೇಹಮಯಿ ಕೃಷ್ಣ ಪರ ವಕೀಲ ಕೆ.ಜಿ.ರಾಘವನ್ ವಾದ ಮಂಡಿಸಿದರು. ವಾದ ಮಂಡನೆ ಬಳಿಕ ನ್ಯಾಯಾಲಯ ಸೆ.9ಕ್ಕೆ ಅರ್ಜಿ ವಿಚಾರಣೆಯನ್ನು ಮುಂದೂಡಿದೆ.

ಇದೇ ವೇಳೆ ಸೆಪ್ಟೆಂಬರ್ 12ರಂದು ಅರ್ಜಿ ವಿಚಾರಣೆಯನ್ನು ಪೂರ್ಣಗೊಳಿಸೋಣ ಎಂದು ನ್ಯಾ.ನಾಗಪ್ರಸನ್ನ ಅವರಿದ್ದಪೀಠ ಅಭಿಪ್ರಾಯ ವ್ಯಕ್ತಪಡಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular