HomeKarnatakaBIG NEWS: ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ಡಿಬಾರ್ ಆದೇಶಕ್ಕೆ ಹೈಕೋರ್ಟ್ ತಡೆ

BIG NEWS: ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ಡಿಬಾರ್ ಆದೇಶಕ್ಕೆ ಹೈಕೋರ್ಟ್ ತಡೆ

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾ ಹಗರಣದ ತನಿಖೆ ನಡೆಸುತ್ತಿರುವ ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ಡಿಬಾರ್ ಮಾಡಿ ಕೇಂದ್ರ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದೆ.

ಮುಡಾ ಹಗರಣದ ತನಿಖೆಗೆ ರಾಜ್ಯ ಸರ್ಕಾರ ನಿವೃತ್ತ ನ್ಯಾ.ಪಿ.ಎನ್.ದೇಸಾಯಿ ಅವರನ್ನು ನೇಮಕ ಮಡಿತ್ತು. ಈ ಹಿನ್ನೆಲೆಯಲ್ಲಿ ಅವರು ಕೇಂದ್ರ ಸಿಎಟಿ ಸ್ಥಾನ ನಿರಾಕರಿಸಿದ್ದರು. ಇದರಿಂದ ಕೇಂದ್ರ ಸರ್ಕಾರ ಮೂರು ವರ್ಷಗಳ ಕಾಲ ಸರ್ಕಾರದ ಎಲ್ಲಾ ನೇಮಕಾತಿಗಳಿಂದ ಡಿಬಾರ್ ಮಡಿ ಆದೇಶ ಹೊರಡಿಸಿತ್ತು. ಇದನ್ನು ಪ್ರಶ್ನಿಸಿ ದೇಸಾಯಿ ಹೈಕೋರ್ಟ್ ಮೆಟ್ಟಿಲೇರಿದ್ದರು.

ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಕೇಂದ್ರ ಸರ್ಕಾರದ ಡಿಬಾರ್ ಆದೇಶಕ್ಕೆ ತಡೆ ನೀಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular