HomeKarnatakaBIG NEWS: ಮುಡಾ ಹಗರಣ: ಮಾಜಿ ಆಯುಕ್ತರ ವಿರುದ್ಧ ಲೋಕಾಯುಕ್ತದಲ್ಲಿ ದೂರು ದಾಖಲು

BIG NEWS: ಮುಡಾ ಹಗರಣ: ಮಾಜಿ ಆಯುಕ್ತರ ವಿರುದ್ಧ ಲೋಕಾಯುಕ್ತದಲ್ಲಿ ದೂರು ದಾಖಲು

ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಡಾ ಆಯುಕ್ತ ದಿನೇಶ್ ಕುಮಾರ್ ಜಿ.ಟಿ ಸೇರಿ ಇಬ್ಬರ ವಿರುದ್ಧ ಲೋಕಾಯುಕ್ತದಲ್ಲಿ ದೂರು ದಾಖಲಾಗಿದೆ.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾ ನಿವೇಶನ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಹಗರಣಕ್ಕೆ ಸಂಬಂಧಿಸಿದಂತೆ ಇಬ್ಬರು ಮಾಜಿ ಮುಡಾ ಆಯುಕ್ತರ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಲಾಗಿದೆ.

ಮಾಜಿ ಮೂಡಾ ಆಯುಕ್ತ ನಟೇಶ್ ಹಾಗೂ ದಿನೇಶ್ ಕುಮಾರ್ ಜಿ.ಟಿ ವಿರುದ್ಧ ಕೃಷ್ಣರಾಜ ಕ್ಷೇತ್ರದ ಬಿಜೆಪಿ ಶಾಸಕ ಶ್ರೀವತ್ಸ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ. ಈ ಇಬ್ಬರು ಅಧಿಕಾರಿಗಳು ಮುಡಾ ಅಕ್ರಮದಲ್ಲಿ ಭಾಗಿಯಾಗಿದ್ದರು. ತಕ್ಷಣ ಅವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿ ಅವರನ್ನು ಬಂಧಿಸಬೇಕು ಎಂದು ಒತ್ತಾಯಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಲ್ಲದೇ ಭೂಸ್ವಾಧೀನ ಅಧಿಕಾರಿಗಳು, ಸರ್ಕಾರದ ಕಾರ್ಯದರ್ಶಿಗಳು, ನಗರಾಭಿವೃದ್ಧಿ ಇಲಾಖೆ ವಿರುದ್ಧ ಕ್ರಮ ಕೈಗೊಲ್ಲಬೇಕು. ಮುಡಾ ಅಕ್ರಮದಿಂದ ಸರ್ಕಾರದ ಬೊಕ್ಕಸಕ್ಕೆ ನಷ್ಟವಾಗಿದೆ. ಅಧಿಕಾರಿಗಳಿಂದಲೇ ಹಣ ವಸೂಲಿ ಮಡಬೇಕು ಎಂದು ಆಗ್ರಹಿಸಿದ್ದಾರೆ.

 

For Latest News Updates, Join Our Whatsapp Community🚩
RELATED ARTICLES

Most Popular