HomeKarnatakaಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ನೇರ ಭಾಗಿ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆರೋಪ

ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ನೇರ ಭಾಗಿ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆರೋಪ

ಹುಬ್ಬಳ್ಳಿ: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ನೇರವಾಗಿ ಭಾಗಿಯಾಗಿದ್ದಾರೆ. ಹಾಗಾಗಿ ಅವರು ರಾಜೀನಾಮೆ ಕೊಡಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಗ್ರಹಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಹ್ಲಾದ್ ಜೋಶಿ, ಅಹಿಂದ, ಅಹಿಂದ ಎಂದುಕೊಂಡು ಎಸ್ ಸಿ ಎಸ್ ಟಿ ಹಣ ಗ್ಯಾರಂಟಿ ಯೋಜನೆಗಳಿಗೆ ಉಪಯೋಗ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯ ಕಡುಭ್ರಷ್ಟ ಹಾಗೂ ಅಪ್ರಾಮಾಣಿಕ ಎಂದು ಕಿಡಿಕಾರಿದರು.

ಒಂದುವರೆ ವರ್ಷದ ಆಡಳಿತದಲ್ಲಿ ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದ ಮೇಲೆ ಭ್ರಷ್ಟಾಚಾರ ನಡೆಸಿದೆ. ವಾಲ್ಮೀಕಿ ನಿಗಮದಲ್ಲಿ ಹಗರಣ, ಮೂಡಾದಲ್ಲಿ ಅಕ್ರಮ ನಡೆದಿದೆ. ಸಾವಿರಾರು ಕೋಟಿ ಸಂಗ್ರಹ ಮಾಡಿ ಆಗಾಗ ತೆಂಗಾಣಕ್ಕೆ ಕೊಟ್ಟಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣವನ್ನು ನೂರಾರು ಜನರಿಗೆ ವರ್ಗಾವಣೆ ಮಾಡಿದ್ದಾರೆ. ಎಲ್ಲಾ ಹಣ ಹೈದರಾಬಾದ್ ಕಂಪನಿಗೆ ಹೋಗಿದೆ. ಇದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಗೊತ್ತಿದ್ದೇ ಮಾಡಿರುವುದು ಎಂದು ಆರೋಪಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಿಎಂ ಸಿದ್ದರಾಮಯ್ಯನವರು ರಾಜೀನಾಮೆ ಕೊಡಲೇಬೇಕು. ಇದು ದಪ್ಪ ಚರ್ಮದ ಸರ್ಕಾರ ಈ ನಿಟ್ಟಿನಲ್ಲಿ ಬಿಜೆಪಿ ಹೋರಾಟ ನಡೆಸಲಿದೆ ಎಂದು ಹೇಳಿದರು.

For Latest News Updates, Join Our Whatsapp Community🚩
RELATED ARTICLES

Most Popular