HomeKarnatakaBIG BREAKING: ರಾಷ್ಟ್ರಪತಿಗಳ ಅಂಗಳ ತಲುಪಿದ ಮುಡಾ ಹಗರಣ: ರಾಜ್ಯದ ಬೆಳವಣಿಗೆ ಬಗ್ಗೆ ರಾಜ್ಯಪಾಲರಿಂದ ಮಾಹಿತಿ...

BIG BREAKING: ರಾಷ್ಟ್ರಪತಿಗಳ ಅಂಗಳ ತಲುಪಿದ ಮುಡಾ ಹಗರಣ: ರಾಜ್ಯದ ಬೆಳವಣಿಗೆ ಬಗ್ಗೆ ರಾಜ್ಯಪಾಲರಿಂದ ಮಾಹಿತಿ ರವಾನೆ

ಬೆಂಗಳೂರು: ಮುಡಾ ಅಕ್ರಮ ಸೈಟ್ ಹಂಚಿಕೆ ಪ್ರಕರಣ ರಾಷ್ಟ್ರಪತಿಗಳ ಅಂಗಳ ತಲುಪಿದೆ. ರಾಜ್ಯಪಾಲರು ರಾಜ್ಯದ ವಿದ್ಯಮಾನಗಳ ಬಗ್ಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಮಾಹಿತಿ ನೀಡಿದ್ದಾರೆ.

ಅಲ್ಲದೇ, ಕೇಂದ್ರ ಗೃಹ ಸಚಿವಾಲಯಕ್ಕೂ ರಾಜ್ಯಪಾಲರು ವಿವರಣೆ ನೀಡಿದ್ದಾರೆ. ಮುಡಾ ಹಗರಣದ ವಿಚಾರವಾಗಿ ನಡೆದ ಪ್ರತಿಭಟನೆ ಮತ್ತು ಬೆಳವಣಿಗೆಗಳ ಬಗ್ಗೆ ರಾಷ್ಟ್ರಪತಿಗಳಿಗೆ ವರದಿ ನೀಡಿದ್ದಾರೆ.

ರಾಜಭವನದ ಮೇಲೆ ರಾಜ್ಯ ಸರ್ಕಾರ ನಿರಂತರ ಒತ್ತಡ ಹೇರುತ್ತಿದೆ. ರಾಜ್ಯಾದ್ಯಂತ ವ್ಯಾಪಕ ಪ್ರತಿಭಟನೆ ನಡೆಸಲಾಗಿದೆ. ಹಲವೆಡೆ ಪ್ರತಿಕೃತಿ ದಹನ, ಕಾಂಗ್ರೆಸ್ ನಾಯಕರಿಂದ ರಾಜಭವನಕ್ಕೆ ನುಗ್ಗುವ ಬೆದರಿಕೆ ಹೀಗೆ ಹಲವು ಅಂಶಗಳ ವರದಿಯನ್ನು ರಾಜ್ಯಪಾಲರು ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೆಲವು ಸಚಿವರು ಉದ್ದೇಶಪೂರ್ವಕವಾಗಿ ಕರ್ನಾಟಕ ವಿರೋಧಿ ರಾಜ್ಯಪಾಲರು, ಗೋ ಬ್ಯಾಕ್ ಗವರ್ನರ್ ಚಳವಳಿ ನಡೆಸಿದ್ದಾರೆ ಎಂದು ರಾಷ್ಟ್ರಪತಿ, ಕೇಂದ್ರ ಗೃಹ ಸಚಿವಾಲಯಕ್ಕೆ ರಾಜ್ಯಪಾಲರು ವಿವರಣೆ ನೀಡಿದ್ದಾರೆ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular