ಬೆಂಗಳೂರು: ಮುಡಾ ನಿವೇಶನ ಅಕ್ರಮ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿವೃತ್ತ ನ್ಯಾ.ಪಿ.ಎನ್.ದೇಸಾಯಿ ಆಯೋಗದಿಂದ ಸರ್ಕಾರಕ್ಕೆ ವರದಿ ಸಲ್ಲಿಸಲಾಗಿದೆ.
ವಿಧಾನಸೌಧದಲ್ಲಿ ನಿವೃತ್ತ ನ್ಯಾ. ಪಿ.ಎನ್.ದೇಸಾಯಿ ಅವರ ಏಕಸದಸ್ಯ ಆಯೋಗ, ತನಿಖಾ ವರದಿಯನ್ನು ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಸಲ್ಲಿಸಿದೆ. ಸರ್ಕಾರದ ಪರವಾಗಿ ಶಾಲಿನಿ ರಜನೀಶ್ ವರದಿ ಸ್ವೀಕರಿಸಿದ್ದಾರೆ.
ಒಟ್ಟು ಆರು ಸಣ್ಪುಟಗಳ ವರದಿ ಸಲ್ಲಿಕೆಯಾಗಿದ್ದು, ಸಚಿವ ಸಂಪುಟ ಸಭೆಯಲ್ಲಿ ವರದಿ ಮಂಡಿಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.