HomeKarnatakaBREAKING NEWS: ಮುಡಾ ಹಗರಣ: CBI ತನಿಖೆಗೆ ವರ್ಗಾಯಿಸುವಂತೆ ಹೈಕೋರ್ಟ್ ಗೆ ಅರ್ಜಿ ಸಲ್ಲಿಕೆ

BREAKING NEWS: ಮುಡಾ ಹಗರಣ: CBI ತನಿಖೆಗೆ ವರ್ಗಾಯಿಸುವಂತೆ ಹೈಕೋರ್ಟ್ ಗೆ ಅರ್ಜಿ ಸಲ್ಲಿಕೆ

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಸಿಬಿಐ ಸಂಕಷ್ಟವೂ ಎದುರಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಪ್ರಕರಣದ ತನಿಖೆಯನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂಬ ಒತ್ತಾಯಗಳು ಕೇಳಿಬರುತ್ತಿವೆ.

ಈ ನಡುವೆ ಸಿಎಂ ಸಿದ್ದರಾಮಯ್ಯ ವಿರುದ್ಧದ ದೂರುದಾರ ಸ್ನೇಹಮಯಿ ಕೃಷ್ಣ ಹೈಕೋರ್ಟ್ ನಲ್ಲಿ ಮತ್ತೊಂದು ಅರ್ಜಿ ಸಲ್ಲಿಸಿದ್ದು, ಸಿಬಿಐ ತನಿಖೆಗೆ ವರ್ಗಾಯಿಸುವಂತೆ ಕೋರಿದ್ದಾರೆ.

ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣ ತನಿಖೆಯನ್ನು ಸಿಬಿಐಗೆ ವರ್ಗಾವಣೆ ಮಾಡುವಂತೆ ಸ್ನೇಹಮಯಿ ಕೃಷ್ಣ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ಸೋಮವಾರ ಅರ್ಜಿ ವಿಚಾರಣೆ ನಡೆಯಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಲೋಕಾಯುಕ್ತ ತನಿಖೆಗೆ ಆದೇಶ ನೀಡಿತ್ತು. ಈ ಹಿನ್ನೆಲೆಯಲ್ಲಿ ಮೈಸೂರು ಲೋಕಾಯುಕ್ತ ಕಚೇರಿಯಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಕುಟುಂಬದ ವಿರುದ್ಧ ಎಫ್ಐಆರ್ ದಾಖಲಾಗಿದೆ. ಈ ನಡುವೆ ಪ್ರಕರಣವನ್ನು ಸಿಬಿಐಗೆ ವರ್ಗಾಯಿಸುವಂತೆ ದೂರುದಾರ ಒತ್ತಾಯಿಸಿದ್ದಾರೆ.

 

For Latest News Updates, Join Our Whatsapp Community🚩
RELATED ARTICLES

Most Popular