HomeKarnatakaBIG NEWS: ಮುಡಾ ಪ್ರಕರಣದಲ್ಲಿ ED ನೋಟಿಸ್ ರಾಜಕೀಯ ಪ್ರೇರಿತ: ಸಿಎಂ ಸಿದ್ದರಾಮಯ್ಯ ವಾಗ್ದಾಳಿ

BIG NEWS: ಮುಡಾ ಪ್ರಕರಣದಲ್ಲಿ ED ನೋಟಿಸ್ ರಾಜಕೀಯ ಪ್ರೇರಿತ: ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪತ್ನಿಗೆ ಜಾರಿ ನಿರ್ದೇಶನಾಲಯ ನೀಡಿದ್ದ ಸಮನ್ಸ್ ಗೆ ಹೈ ಕೋರ್ಟ್ ತಡೆಯಾಜ್ಞೆ ನೀಡಿರುವ ವಿಚಾರವಾಗಿ ಸ್ವತಃ ಸಿಎಂ ಪ್ರತಿಕ್ರಿಯೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮುಡಾ ಪ್ರಕರಣವೇ ರಾಜಕೀಯ ಪ್ರೇರಿತ. ಅದರಲ್ಲಿಯೂ ಜಾರಿ ನಿರ್ದೇಶನಾಲಯ-ಇಡಿ ನೋಟಿಸ್ ರಾಜಕೀಯ ಪ್ರೇರಿತವಲ್ಲದೇ ಬೇರೇನು? ಇಡಿ ನೀಡಿದ್ದ ಸಮನ್ಸ್ ಗೆ ಹೈಕೋರ್ಟ್ ತಡೆ ನೀಡಿದೆ. ಮುಡಾ ಕೇಸ್ ನಲ್ಲಿ ಪತ್ನಿ ಪಾರ್ವತಿಗೆ ನೀಡಿದ್ದ ಸಮನ್ಸ್ ಗೆ ಕೋರ್ಟ್ ತಡೆ ನೀಡಿದೆ. ಲೋಕಾಯುಕ್ತ ತನಿಖೆ ನಡೆಯುತ್ತಿರುವಾಗ ಯಾಕಿಷ್ಟು ಆತುರ ಎಂದು ಹೈಕೋರ್ಟ್ ಪ್ರಶ್ನಿಸಿದೆ ಎಂದು ಹೇಳಿದರು.

ಜಾರಿ ನಿರ್ದೇಶನಾಲಯ ನೀಡಿರುವ ನೋಟಿಸ್ ಗೆ ಹೈಕೋರ್ಟ್ ತಡೆ ನೀಡಿದೆ. ನೀವು ಆತುರ ಮಾಡುವುದರಲ್ಲಿ ಅರ್ಥವಿಲ್ಲ ಎಂದು ತಡೆಯಾಜ್ಞೆ ನೀಡಿದೆ. ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಬೇಕೇ ಬೇಡವೇ ಎಂದು ಚರ್ಚೆಯಾಗುತ್ತಿದೆ. ಹೈಕೋರ್ಟ್ ವಾದ-ಪ್ರತಿವಾದ ಆಲಿಸಿ ತೀರ್ಪು ಕಾಯ್ದಿರಿಸಿದೆ. ನನಗೆ ಯಾವುದೇ ಆತಂಕವಿಲ್ಲ, ನ್ಯಾಯ ಸೊಗುವ ಭರವಸೆ ಇದೆ ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular