HomeLatest NewsBREAKING NEWS: ಮುಡಾ ಹಗರಣ: ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ; ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ರಾಜ್ಯಪಾಲ...

BREAKING NEWS: ಮುಡಾ ಹಗರಣ: ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ; ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ರಾಜ್ಯಪಾಲ ಗೆಹ್ಲೋಟ್

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ – ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದಾರೆ. ಈ ಮೂಲಕ ಸಿಎಂ ಸಿದ್ದರಾಮಯ್ಯನವರಿಗೆ ಮುಡಾ ಸಂಕಷ್ಟ ಎದುರಾಗಿದೆ.

ಮುಡಾ ಅಕ್ರಮ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ವಿಚಾರಣೆ ನಡೆಸಿ ತನಿಖೆ ನಡೆಸಬಹುದು ಎಂದು ರಾಜ್ಯಪಾಲರು ಅನುಮತಿ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆ ಆರಂಭವಾಗಲಿದೆ.

ಟಿ.ಜೆ.ಅಬ್ರಾಹಂ ನೀಡಿದ್ದ ದೂರಿಗೆ ಸಂಬಂಧಿಸಿದಂತೆ ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿದ್ದಾರೆ. ಅಲ್ಲದೆ ಟಿ.ಜೆ.ಅಬ್ರಾಹಂ ಅವರಿಗೆ ಬೆಳಿಗ್ಗೆ 10 ಗಂಟೆಗೆ ರಾಜಭವನಕ್ಕೆ ಬಂದು ಭೇಟಿಯಾಗಲು ರಾಜ್ಯಪಾಲರು ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular