HomeKarnatakaBIG NEWS: ಮುಡಾ ಹಗರಣ: ಸಿಎಂ ಸಿದ್ದರಾಮಯ್ಯಗೆ 2 ದಿನ ನಿರಾಳ; ವಿಚಾರಣೆ ಮುಂದೂಡಿದ ಹೈಕೋರ್ಟ್

BIG NEWS: ಮುಡಾ ಹಗರಣ: ಸಿಎಂ ಸಿದ್ದರಾಮಯ್ಯಗೆ 2 ದಿನ ನಿರಾಳ; ವಿಚಾರಣೆ ಮುಂದೂಡಿದ ಹೈಕೋರ್ಟ್

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದ ರಾಜ್ಯಪಾಲರ ನಡೆ ಪ್ರಶ್ನಿಸಿ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಮತ್ತೆ ಮುಂದೂಡಿದೆ.

ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿ ವಿಚಾರಣೆ ವೇಳೆ ಸಿಎಂ ಪರ ವಕೀಲ ಅಭಿಷೇಕ್ ಮನು ಸಿಂಘ್ವಿ ಸುದೀರ್ಘ ವಾದ ಮಂಡನೆ ಮಾಡಿದರು. ಈ ವೇಳೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪರ ವಕೀಲ ತುಷಾರ್ ಮೆಹ್ತಾ ಶನಿವರ ವಾದ ಮಂಡನೆ ಮಾಡುವುದಾಗಿ ಕೋರ್ಟ್ ಗೆ ತಿಳಿಸಿದರು. ಇದಕ್ಕೆ ಕೋರ್ಟ್ ಒಪ್ಪಿಗೆ ಸೂಚಿಸಿದೆ.

ಈ ಹಿನ್ನೆಲೆಯಲ್ಲಿ ಅರ್ಜಿ ವಿಚಾರಣೆಯನ್ನು ಆಗಸ್ಟ್ 31ಕ್ಕೆ ಬೆಳಿಗ್ಗೆ 10:30ಕ್ಕೆ ಮುಂದೂಡಿ ಹೈಕೋರ್ಟ್ ಆದೇಶ ಹೊರಡಿಸಿದೆ. ಅಲ್ಲದೇ ಈ ಹಿಂದಿನ ಮಧ್ಯಂತರ ಆದೇಶವನ್ನೂ ಮುಂದುವರೆಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular