HomeKarnatakaBIG NEWS: ಹೈಕೋರ್ಟ್ ನಲ್ಲಿ ವಿಚಾರಣೆ ನಡೆಯುತ್ತಿದೆ; ಏನಾಗುತ್ತೆ ನೋಡೋಣ ಎಂದ ಸಿಎಂ ಸಿದ್ದರಾಮಯ್ಯ

BIG NEWS: ಹೈಕೋರ್ಟ್ ನಲ್ಲಿ ವಿಚಾರಣೆ ನಡೆಯುತ್ತಿದೆ; ಏನಾಗುತ್ತೆ ನೋಡೋಣ ಎಂದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ನೀಡಿರುವ ಅನುಮತಿ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿರುವ ಅರ್ಜಿ ವಿಚಾರಣೆ ಹೈಕೋರ್ಟ್ ನಲ್ಲಿ ಆರಂಭವಾಗಿದೆ.

ಈ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದಾರೆ. ಅದನ್ನು ಪ್ರಶ್ನಿಸಿ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಲಾಗಿದ್ದು, ಇಂದು ಅರ್ಜಿ ವಿಚಾರಣೆ ನಡೆಯುತ್ತಿದೆ. ನೋಡೋಣ ಏನಾಗುತ್ತೆ ಅಂತಾ…..ಎಂದು ತಿಳಿಸಿದರು.

ರಾಜ್ಯಪಾಲರ ನಡೆ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿರುವ ಅರ್ಜಿ ವಿಚಾರಣೆ ಹೈಕೋರ್ಟ್ ನಲ್ಲಿ ನಡೆಯುತ್ತಿದ್ದು, ಸಿಎಂ ಸಿದ್ದರಾಮಯ್ಯ ಪರ ಹಿರೀಯ ವಕಿಲ ಅಭಿಷೇಕ್ ಮನು ಸಿಂಘ್ವಿ ವಾದ ಮಂಡನೆ ಮಾಡುತ್ತಿದ್ದಾರೆ. ಇಂದೇ ಪ್ರಾಸಿಕ್ಯೂಷನ್ ಭವಿಷ್ಯ ನಿರ್ಧಾರವಾಗಲಿದೆಯೇ ಕಾದುನೋಡಬೇಕಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular