HomeKarnatakaBREAKING NEWS: ಸಿಎಂ ಸಿದ್ದರಾಮಯ್ಯಗೆ ಮುಡಾ ಸಂಕಷ್ಟ: ಲೋಕಾಯುಕ್ತದಲ್ಲಿ ದೂರು ದಾಖಲು

BREAKING NEWS: ಸಿಎಂ ಸಿದ್ದರಾಮಯ್ಯಗೆ ಮುಡಾ ಸಂಕಷ್ಟ: ಲೋಕಾಯುಕ್ತದಲ್ಲಿ ದೂರು ದಾಖಲು

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾದಲ್ಲಿ ನಡೆದಿರುವ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಲಾಗಿದೆ.

ಬಿಜೆಪಿ ಮುಖಂಡ ಎನ್.ಆರ್.ರಮೇಶ್, ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ 400 ಪುಟಗಳ ದಾಖಲೆ ಸಮೇತ ಲೋಕಾಯುಕ್ತಕ್ಕೆ ದೂರು ನೀಡಿದ್ದು, ಸೂಕ್ತ ತನಿಖೆಗೆ ಒತ್ತಾಯಿಸಿದ್ದಾರೆ.

ಮುಡಾದಿಂದ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಹೆಸರಿಗೆ ಹಂಚಿಕೆಯಾಗಿರುವ 14 ನಿವೇಶನಗಳು, ಅದರ ಮೂಲ ದಾಖಲೆಗಳ ಸಮೇತ ದೂರು ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ, ಸಿದ್ದರಾಮಯ್ಯ ಅವರ ಭಾವ ಹಾಗೂ ಮುಡಾದ ಕೆಲ ಅಧಿಕಾರಿಗಳ ವಿರುದ್ಧ ದೂರು ನೀಡಲಾಗಿದ್ದು, ತನಿಖೆ ನಡೆಸುವಂತೆ ಒತ್ತಾಯಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular