HomeKarnatakaBREAKING NEWS: ಮುಡಾ ಹಗರಣ: ಮೈಸೂರು ಲೋಕಾಯುಕ್ತ ಕಚೇರಿಗೆ ವಿಚಾರಣೆಗೆ ಹಾಜರಾದ ಸಿಎಂ ಸಿದ್ದರಾಮಯ್ಯ

BREAKING NEWS: ಮುಡಾ ಹಗರಣ: ಮೈಸೂರು ಲೋಕಾಯುಕ್ತ ಕಚೇರಿಗೆ ವಿಚಾರಣೆಗೆ ಹಾಜರಾದ ಸಿಎಂ ಸಿದ್ದರಾಮಯ್ಯ

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಲೋಕಾಯುಕ್ತ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಿದ್ದಾರೆ.

ಮುಡಾ ಹಗರಣದಲ್ಲಿ ಎ1 ಆರೋಪಿಯಾಗಿರುವ ಸಿಎಂ ಸಿದ್ದರಾಮಯ್ಯ ಇಂದು ಬೆಳಿಗ್ಗೆ 10 ಗಂಟೆಗೆ ಮೈಸೂರು ಲೋಕಾಯುಕ್ತ ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಲೋಕಾಯುಕ್ತ ಎಸ್ ಪಿ ಉದೇಶ್ ನೇತೃತ್ವದಲ್ಲಿ ಸಿಎಂ ಸಿದ್ದರಾಮಯ್ಯ ಅವರ ವಿಚಾರಣೆ ಆರಂಭವಾಗಿದೆ.

ಬೆಂಗಳೂರಿನಿಂದ ಖಾಸಗಿ ಕಾರಿನಲ್ಲಿ ಮೈಸೂರಿಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ಬೆಳಿಗ್ಗೆ 10 ಗಂಟೆಗೆ ಮೈಸೂರು ಲೋಕಾಯುಕ್ತ ಕಚೇರಿಗೆ ಆಗಮಿಸಿ ವಿಚಾರಣೆಗೆ ಹಾಜರಾಗಿದ್ದಾರೆ. ಲೋಕಾಯುಕ್ತದಿಂದ ಸಿಎಂ ವಿಚಾರಣೆ ಹಿನ್ನೆಲೆಯಲ್ಲಿ ಪೊಲೀಸ್ ಭಿಗಿ ಭದ್ರತೆ ಕೈಗೊಳ್ಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular