BREAKING: ಸಿಎಂ ಸಿದ್ದರಾಮಯ್ಯ ವಿರುದ್ಧ ತೀವ್ರಗೊಂಡ ಪ್ರತಿಭಟನೆ: ವಾಹನ ಸಮೇತ ಬಿಜೆಪಿ ನಾಯಕರನ್ನು ವಶಕ್ಕೆ ಪಡೆದ ಪೊಲೀಸರು

ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಒಂದೆಡೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರು ಲೋಕಾಯುಕ್ತ ಕಚೇರಿಗೆ ಹಾಜರಾಗಿ ವಿಚಾರಣೆ ಎದುರಿಸುತ್ತಿದ್ದರೆ, ಮತ್ತೊಂದೆಡೆ ವಿಪಕ್ಷ ಬಿಜೆಪಿ ನಾಯಕರು, ಕಾರ್ಯಕರ್ತರು ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ತೀವ್ರಗೊಳಿಸಿದ್ದಾರೆ.

ಶಾಸಕ ಶ್ರೀವತ್ಸ ನೇತೃತ್ವದಲ್ಲಿ ಮೈಸೂರಿನಲ್ಲಿ ಬಿಜೆಪಿ ನಾಯಕರು, ಮಹಿಳಾ ಮೋರ್ಚಾ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ರಾಜ್ಯ ಸರ್ಕಾರ ಹಾಗೂ ಸಿಎಂ ಸಿದ್ದರಾಮಯ್ಯ ವಿರುದ್ಧ ಘೋಷಣೆ ಕೂಗಿದ್ದಾರೆ. ಸಿದ್ದರಾಮಯ್ಯ ರಾಜೀನಾಮೆ ನೀಡುವಂತೆ ಆಗ್ರಹಿಸಿದ್ದಾರೆ.

ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ಬಿಜೆಪಿ ನಾಯಕರು ಆಗಮಿಸಿರುವ ವಾಹನಗಳ ಸಮೇತ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದಿದ್ದಾರೆ. ಇನ್ನೊಂದೆಡೆ ಬಿಜೆಪಿ ಮಹಿಳಾ ಕಾರ್ಯಕರ್ತರನ್ನು ವಶಕ್ಕೆ ಪಡೆಯಲಾಗಿದೆ. ಈ ವೇಳೆ ಪ್ರತಿಭಟನಾಕಾರರು ಪೊಲೀಸರು ಕಾಂಗ್ರೆಸ್ ಸರ್ಕಾರದ ಏಜೆಂಟ್ ರಂತೆ ವರ್ತಿಸುತ್ತಿದ್ದಾರೆ. ಪ್ರತಿಭಟನೆ ಹತ್ತಿಕ್ಕುವ ಕೆಲಸ ಮಾಡುತ್ತಿದ್ದಾರೆ ಎಂದು ಪೊಲೀಸರ ವಿರುದ್ಧವೂ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರತಿಭಟನಾ ನಿರತರನ್ನು ವಾಹನಗಳಲ್ಲಿ ತುಂಬಿ ಪೊಲೀಸರು ಕರೆದೊಯ್ದಿದ್ದಾರೆ. ಮೈಸೂರು ನಗರದಾದ್ಯಂತ ಮುಂಜಾಗ್ರತಾ ಕ್ರಮವಾಗಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read