HomeKarnatakaBREAKING NEWS: ಸಿಎಂ ಸಿದ್ದರಾಮಯ್ಯ ಲೋಕಾಯುಕ್ತ ವಿಚಾರಣೆ ಅಂತ್ಯ

BREAKING NEWS: ಸಿಎಂ ಸಿದ್ದರಾಮಯ್ಯ ಲೋಕಾಯುಕ್ತ ವಿಚಾರಣೆ ಅಂತ್ಯ

ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದ ಮುಖ್ಯಮಂತ್ರಿ ಸಿದ್ದರಾಯ್ಯ ಅವರ ವಿಚಾರಣೆ ಅಂತ್ಯವಾಗಿದೆ.

ಇಂದು ಬೆಳಿಗ್ಗೆ 10 ಗಂಟೆಗೆ ಮೈಸೂರು ಲೋಕಾಯುಕ್ತ ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದ ಸಿಎಂ ಸಿದ್ದರಾಮಯ್ಯ 12 ಗಂಟೆವರೆಗೆ ವಿಚಾರಣೆ ಎದುರಿಸಿದರು. ಲೋಕಾಯುಕ್ತ ಎಸ್ ಪಿ ಉದೇಶ್ ನೇತೃತ್ವದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಸತತ 2 ಗಂಟೆಗಳ ಕಾಲ ವಿಚಾರಣೆ ನಡೆಸಲಾಗಿದ್ದು, ಅಧಿಕಾರಿಗಳ ಹಲವು ಪ್ರಶ್ನೆಗಳಿಗೆ ಸಿಎಂ ಉತ್ತರ ನೀಡಿದ್ದಾರೆ.

ವಿಚಾರಣೆ ಬಳಿಕ ಸಿಎಂ ಸಿದ್ದರಾಮಯ್ಯ ಮೈಸೂರು ಲೋಯುಕ್ತ ಕಚೇರಿಯಿಂದ ಹೊರ ಬಂದಿದ್ದಾರೆ. ಬಳಿಕ ಮೈಸೂರು ಅತಿಥಿ ಗೃಹಕ್ಕೆ ತೆರಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular