HomeKarnatakaBREAKING NEWS: ಮೂಡಾ ಹಗರಣದ ದೂರುದಾರ ಸ್ನೇಹಮಯಿ ಕೃಷ್ಣ ವಿರುದ್ಧ FIR ದಾಖಲು

BREAKING NEWS: ಮೂಡಾ ಹಗರಣದ ದೂರುದಾರ ಸ್ನೇಹಮಯಿ ಕೃಷ್ಣ ವಿರುದ್ಧ FIR ದಾಖಲು

ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ದೂರು ನೀಡಿದ್ದ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ನೀಡಿರುವ ದೂರಿನ ಹಿನ್ನೆಲೆಯಲ್ಲಿ ಸ್ನೇಹಮಯಿ ಕೃಷ್ಣ ವಿರುದ್ಧ ಮೈಸೂರಿನ ದೇವರಾಜ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಸ್ನೇಹಮಯಿ ಕೃಷ್ಣ ವಿರುದ್ಧ ಬ್ಲ್ಯಾಕ್ ಮೇಲ್ ಆರೋಪ ಕೇಳಿಬಂದಿದೆ. ಅಲ್ಲದೇ ಪ್ರತಿದಿನ ಸಿಎಂ ಸಿದ್ದರಾಮಯ್ಯ ವಿರುದ್ಧ ಒಂದಿಲ್ಲೊಂದು ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ತೇಜೋವಧೆ ಮಾಡುತ್ತಿದ್ದಾರೆ. ಈ ನಿಟ್ಟಿನಲ್ಲಿ ಸ್ನೇಹಮಯಿ ಕೃಷ್ಣ ವಿರುದ್ಧ ಕ್ರಮ ಕೈಗೊಳ್ಳುವಂತೆ ಎಂ.ಲಕ್ಷ್ಮಣ್ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಸ್ನೇಹಮಯಿ ಕೃಷ್ಣ ವಿರುದ್ಧ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular