HomeKarnatakaಮುಡಾ ಅಕ್ರಮ ಪ್ರಕರಣ: ನ್ಯಾಯಾಂಗ ತನಿಖೆಗೆ ಒತ್ತಾಯಿಸಿ ರಾಜ್ಯಪಾಲರಿಗೆ ಪತ್ರ ಬರೆದ ಕಬ್ಬು ಬೆಳೆಗಾರರ ಒಕ್ಕೂಟ

ಮುಡಾ ಅಕ್ರಮ ಪ್ರಕರಣ: ನ್ಯಾಯಾಂಗ ತನಿಖೆಗೆ ಒತ್ತಾಯಿಸಿ ರಾಜ್ಯಪಾಲರಿಗೆ ಪತ್ರ ಬರೆದ ಕಬ್ಬು ಬೆಳೆಗಾರರ ಒಕ್ಕೂಟ

ಬೆಂಗಳೂರು: ಮುಡಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂಕ್ತ ತನಿಖೆಗೆ ಒತ್ತಾಯಿಸಿ ರಾಜ್ಯ ಕಬ್ಬು ಬೆಳೆಗಾರರ ಒಕ್ಕೂಟ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಪತ್ರ ಬರೆದಿದೆ.

ಮುಡಾ ಅಕ್ರಮ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಹೆಸರು ಕೇಳಿಬಂದಿದ್ದು, ಸಿಎಂ ಪತ್ನಿ ಹೆಸರಲ್ಲಿ ಅಕ್ರಮವಾಗಿ ನಿವೇಶನ ಪಡೆದಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಹೈಕೋರ್ಟ್ ನ್ಯಾಯಾಧೀಶರಿಂದ ನ್ಯಾಯಾಂಗ ತನಿಖೆ ನಡೆಸಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಕಬ್ಬು ಬೆಳೆಗಾರರ ಒಕ್ಕೂಟ ಒತ್ತಾಯಿಸಿದೆ.

ಮುಡಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಬಿಜೆಪಿ ಪ್ರತಿಭಟನೆ ಆರಂಭಿಸಿದ್ದು, ಸಿಎಂ ರಾಜೀನಾಮೆಗೆ ಆಗ್ರಹಿಸಿದೆ. ಹಗರಣವನ್ನು ಸಿಬಿಐ ತನಿಖೆಗೆ ನೀಡುವಂತೆ ಒತ್ತಾಯಿಸಿದೆ. ಇದರ ಬೆನ್ನಲ್ಲೇ ಕಬ್ಬು ಬೆಳೆಗಾರರ ಒಕ್ಕೂಟ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಕೊಡುವಂತೆ ರಾಜ್ಯಪಾಲರಿಗೆ ಮನವಿ ಮಾಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular