HomeKarnatakaBREAKING : ಮುಡಾ ಹಗರಣ : ರಾಜ್ಯದ 9 ಕಡೆ 'ED' ಅಧಿಕಾರಿಗಳ ದಾಳಿ, ದಾಖಲೆಗಳ...

BREAKING : ಮುಡಾ ಹಗರಣ : ರಾಜ್ಯದ 9 ಕಡೆ ‘ED’ ಅಧಿಕಾರಿಗಳ ದಾಳಿ, ದಾಖಲೆಗಳ ಪರಿಶೀಲನೆ.!

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ-ಇಡಿ ಅಧಿಕಾರಿಗಳು ರಾಜ್ಯದ 9 ಸ್ಥಳಗಳಲ್ಲಿ ದಾಳಿ ನಡೆಸಿದ್ದಾರೆ.

ಮೂಡಾ ಸೈಟ್ ಅಕ್ರಮ ಪ್ರಕರಣ ಸಂಬಂಧ ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮೈಸೂರು, ಬೆಂಗಳೂರು ಸೇರಿದಂತೆ 9 ಕಡೆಗಳಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ.

ಶನಿವಾರ ಇಡಿ ಅಧಿಕಾರಿಗಳು ಮುಡಾ ಅಧಿಕಾರಿಗಳ ಹೇಳಿಕೆಗಳನ್ನು ಪಡೆದುಕೊಂಡಿದ್ದರು. ಇದರ ಬೆನ್ನಲ್ಲೇ ಇದೀಗ ದಾಳಿ ನಡೆಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular