HomeKarnatakaBREAKING: ಸಿಎಂ ಸಿದ್ದರಾಮಯ್ಯ ಆಪ್ತನ ಮನೆ ಮೇಲೆ ಇಡಿ ಅಧಿಕಾರಿಗಳ ದಾಳಿ: ಮುಖ್ಯಮಂತ್ರಿಗಳಿಗೂ ಹೆಚ್ಚಾಯ್ತು ಆತಂಕ

BREAKING: ಸಿಎಂ ಸಿದ್ದರಾಮಯ್ಯ ಆಪ್ತನ ಮನೆ ಮೇಲೆ ಇಡಿ ಅಧಿಕಾರಿಗಳ ದಾಳಿ: ಮುಖ್ಯಮಂತ್ರಿಗಳಿಗೂ ಹೆಚ್ಚಾಯ್ತು ಆತಂಕ

ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ-ಇಡಿ ಅಧಿಕಾರಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತ, ಕಾಂಗ್ರೆಸ್ ಮುಖಂಡನ ಮನೆ ಮೇಲೆ ದಾಳಿ ನಡೆಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರ ಆಪ್ತ ರಾಕೇಶ್ ಪಾಪಣ್ಣ ಅವರ ಮನೆ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದು, ಪರಿಶೀಲನೆ ನಡೆಸಿದ್ದಾರೆ. ಮೈಸೂರಿನ ಹಿನಕಲ್ ಗ್ರಾಮದಲ್ಲಿರುವ ರಾಕೇಶ್ ಪಾಪಣ್ಣ ನಿವಾಸದ ಮೇಲೆ ಐದಕ್ಕೂ ಹೆಚ್ಚು ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಮುಡಾದ 50:50 ನಿವೇಶ ಹಂಚಿಕೆಯಲ್ಲಿ ಅಕ್ರಮ ಆರೋಪದಲ್ಲಿ ರಾಕೇಶ್ ಪಾಪಣ್ಣ ಹೆಸರು ಕೂಡ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದೆ. ಮುಡಾ ಮಾಜಿ ಆಯುಕ್ತ ನಟೇಶ್, ದಿನೇಶ್, ಬಿಲ್ಡರ್ ಮಂಜುನಾಥ್ ಅವರ ಬೆಂಗಳೂರಿನ ಮನೆ ಮೇಲೆ ಒಂದೆಡೆ ಇಡಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿರುವಾಗಲೇ ಅತ್ತ ಮೈಸೂರಿನಲ್ಲಿ ಸಿಎಂ ಆಪ್ತನ ಮನೆ ಮೇಲೆ ದಾಳಿ ನಡೆಸಲಾಗಿದೆ. ಈ ಎಲ್ಲಾ ಬೆಳವಣಿಗೆ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರಿಗೆ ಕ್ಷಣ ಕ್ಷಣಕ್ಕೂ ಆತಂಕ ಹೆಚ್ಚಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular