HomeKarnatakaBIG NEWS: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಸಂಕಷ್ಟ: ಸಿಬಿಐ ತನಿಖೆ ಭೀತಿ!

BIG NEWS: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಸಂಕಷ್ಟ: ಸಿಬಿಐ ತನಿಖೆ ಭೀತಿ!

ಬೆಂಗಳೂರು: ಮೈಸೂರು ನಗರಾಭಿವೃದ್ದಿ ಪ್ರಾಧಿಕಾರ-ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಸಿಬಿಐ ತನಿಖೆ ಭೀತಿ ಶುರುವಾಗಿದೆ.

ಮುಡಾ ಹಗರಣದ ದೂರುದಾರ ಸ್ನೇಹಮಯಿ ಕೃಷ್ಣ, ತನಗೆ ಲೋಕಾಯುಕ್ತ ತನಿಖೆಯಲ್ಲಿ ನಂಬಿಕೆ ಇಲ್ಲ. ಸಿಬಿಐ ತನಿಖೆಯಲ್ಲಿ ನಂಬಿಕೆ ಇದೆ. ಹಾಗಾಗಿ ಮುಡಾ ಹಗರಣದ ತನಿಖೆಯನ್ನು ಸಿಬಿಐ ಗೆ ವರ್ಗಾಯಿಸುವಂತೆ ಕೋರಿ ಹೈಕೋರ್ಟ್ ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದು, ಇಂದು ಅರ್ಜಿ ವಿಚಾರಣೆ ನಡೆಯಲಿದೆ.

ಒಂದು ವೇಳೆ ಹೈಕೋರ್ಟ್ ಸಿಬಿಐ ತನಿಖೆಗೆ ಒಪ್ಪಿದರೆ ಲೋಕಾಯುಕ್ತ ತನಿಖೆ ಬದಲು ಮುಡಾ ಹಗರಣದ ತನಿಖೆಯನ್ನು ಸಿಬಿಐ ನಡೆಸಲಿದೆ. ಈ ಹಿನ್ನೆಲೆಯಲ್ಲಿ ಇಂದಿನ ರಿಟ್ ಅರ್ಜಿ ವಿಚಾರಣೆ ಮಹತ್ವ ಪಡೆದಿದ್ದು, ಸಿಎಂ ಸಿದ್ದರಾಮಯ್ಯಗೆ ಸಿಬಿಐ ತನಿಖೆ ಆತಂಕವೂ ಶುರುವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular