HomeKarnatakaಮುಡಾ ಹಗರಣ: ಬಿ ರಿಪೋರ್ಟ್ ನೀಡಲು ಲೋಕಾಯುಕ್ತ ಅಧಿಕಾರಿಗಳಿಗೆ 4 ಕೋಟಿ 35 ಲಕ್ಷ ಲಂಚ...

ಮುಡಾ ಹಗರಣ: ಬಿ ರಿಪೋರ್ಟ್ ನೀಡಲು ಲೋಕಾಯುಕ್ತ ಅಧಿಕಾರಿಗಳಿಗೆ 4 ಕೋಟಿ 35 ಲಕ್ಷ ಲಂಚ ನೀಡಲಾಗಿದೆ: ಸ್ನೇಹಮಯಿ ಕೃಷ್ಣ ಆರೋಪ

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಪತ್ನಿ ಪಾರ್ವತಿ ವಿರುದ್ಧ ದೂರು ದಾಖಲಿಸಿದ್ದ ಸ್ನೇಹಮಯಿ ಕೃಷ್ಣಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಹಿನ್ನಡೆಯಾಗಿದ್ದರೂ, ಮತ್ತೆ ಹೋರಾಟ ಮುಂದುವರೆಸಿರುವ ಸ್ನೇಹಮಯಿ ಕೃಷ್ಣ ಇದೀಗ ಮತ್ತೊಂದು ಗಂಭೀರ ಆರೋಪ ಮಡಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸ್ನೇಹಮಯಿ ಕೃಷ್ಣ, ಮುಡಾ ಹಗರಣದ ತನಿಖೆ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳಿಗೆ ಕೋಟಿ ಕೋಟಿ ಲಂಚ ನೀಡಲಾಗಿದೆ. ಹಾಗಾಗಿಯೇ ಮುಡಾ ಹಗರಣದಲ್ಲಿ ಲೋಕಾಯುಕ್ತ ಬಿ ರಿಪೋರ್ಟ್ ನೀಡಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮುಡಾ ಕೇಸ್ ನಲ್ಲಿ ಆಯುಕ್ತರಿಂದ ಲೋಕಾಯುಕ್ತಕ್ಕೆ 4 ಕೋಟಿ 35 ಲಕ್ಷ ಲಂಚ ನೀಡಲಾಗಿದೆ. ಈ ಬಗ್ಗೆ ವಿವರವಿರುವ ಪತ್ರ ಇದೆ. ಪತ್ರದ ಜೊತೆಗೆ ಹಲವಾರು ಸಾಕ್ಷಿಗಳಿವೆ. ಮುಡಾ ಆಯುಕ್ತರಾದ ಡಿ.ಬಿ.ನಟೇಶ್ ಲಂಚ ಪಡೆದಿದ್ದಾರೆ. ಹೀಗಾಗಿ ಬಿ ರಿಪೋರ್ಟ್ ಸಲ್ಲಿಕೆಯಾಗಿದೆ. ಈ ಮೂಲಕ ನಟೇಶ್ ಅವರನ್ನು ಕಾಪಾಡುವ ಕೆಲಸವಾಗಿದೆ. ಬಿ ರಿಪೋರ್ಟ್ ಸಲ್ಲಿಕೆಯಾಗಿದೆ. ಈ ಬಗ್ಗೆ ಸೂಕ್ತ ತನಿಖೆಯಾಗಬೇಕು ಎಂದು ಆಗ್ರಹಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular