HomeKarnatakaಮುಡಾ ಕಚೇರಿಗೆ ಭೇಟಿ ನೀಡಿದ ಟಿ.ಜೆ.ಅಬ್ರಾಹಂ; ಸಿಎಂ ಪತ್ನಿಗೆ ನೀಡಿದ್ದ ನಿವೇಶನ ಹಿಂಪಡೆಯುವಂತೆ ಮನವಿ

ಮುಡಾ ಕಚೇರಿಗೆ ಭೇಟಿ ನೀಡಿದ ಟಿ.ಜೆ.ಅಬ್ರಾಹಂ; ಸಿಎಂ ಪತ್ನಿಗೆ ನೀಡಿದ್ದ ನಿವೇಶನ ಹಿಂಪಡೆಯುವಂತೆ ಮನವಿ

ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿರುವ ಟಿ.ಜೆ,ಅಬ್ರಾಹಂ ಮುಡಾ ಕಚೇರಿಗೆ ಭೇಟಿ ನೀಡಿದ್ದಾರೆ.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾ ಕಚೇರಿಗೆ ಟಿ.ಜೆ.ಅಬ್ರಾಹಂ ದಿಢೀರ್ ಭೇಟಿ ಕುತೂಹಲಕ್ಕೆ ಕಾರಣವಾಯಿತು. ಮೂಡಾ ಕಚೇರಿಗೆ ಭೇಟಿ ನೀಡಿದ ಟಿ.ಜೆ ಅಬ್ರಾಹಂ, ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರಿಗೆ ಮುಡಾದಿಂದ ಮಂಜೂರಾಗಿರುವ ಎಲ್ಲಾ ನಿವೇಶನಗಳನ್ನು ವಾಪಾಸ್ ಪಡೆಯುಂತೆ ಮನವಿ ಮಾಡಿದ್ದಾರೆ.

ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ಹಾಗೂ ಕುಟುಂಬದ ವಿರುದ್ಧ ಟಿ.ಜೆ.ಅಬ್ರಾಹಂ ರಾಜ್ಯಪಾಲರಿಗೆ ದೂರು ನೀಡಿದ್ದು, ಸೂಕ್ತ ತನಿಖೆ ನಡೆಸುವಂತೆ ಒತ್ತಾಯಿಸಿದ್ದಾರೆ. ಈ ಬೆಳವಣಿಗೆ ನಡುವೆಯೇ ಮುಡಾ ಕಚೇರಿಗೆ ಅಬ್ರಾಹಂ ಭೇಟಿ ಅಚ್ಚರಿಗೆ ಕಾರಣವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular