ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಪತ್ನಿ ವಿರುದ್ಧದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಸೈಟ್ ಅಕ್ರಮ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿ ಕುರಿತ ಆದೇಶವನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಮುಂದೂಡಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ, ಪತ್ನಿ ಪಾರ್ವತಿ ವಿರುದ್ಧ ಮುಡಾ ಸೈಟ್ ಅಕ್ರಮವಾಗಿ ಹಂಚಿರುವ ಆರೋಪ ಕೇಳಿಬಂದಿತ್ತು. ಪ್ರಕರಣದ ತನಿಖೆಯನ್ನುನಡೆಸಿದ್ದ ಲೋಕಾಯುಕ್ತ ಪೊಲೀಸರು ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ ವಿರುದ್ಧ ಸೂಕ್ತ ಸಾಕ್ಷಾಧಾರಗಳು ಇಲ್ಲದ ಹಿನ್ನೆಲೆಯಲ್ಲಿ ಕ್ಲಿನ್ ಚಿನ್ ನೀಡಿತ್ತು. ಈ ಹಿನ್ನೆಲೆಯಲ್ಲಿ ಕೋರ್ಟ್ ಗೆ ಬಿ ರಿಪೋರ್ಟ್ ಸಲ್ಲಿಕೆ ಮಾಡಿತ್ತು.
ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ ಬಿ ರಿಪೋರ್ಟ್ ವಿರುದ್ಧ ಆಕ್ಷೇಪ ವ್ಯಕ್ತಪಡಿಸಿ ದೂರುದಾರ ಸ್ನೇಹಮಯಿ ಕೃಷ್ಣ, ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮೆಟ್ಟಿಲೇರಿದ್ದರು. ಜನಪ್ರತಿನಿಧಿಗಳ ನ್ಯಾಯಾಲಯ. ಅರ್ಜಿ ಕುರಿತ ವಾದ-ಪ್ರತಿವಾದ ಆಲಿಸಿ ತೀರ್ಪನ್ನು ಇಂದಿಗೆ ಕಾಯ್ದಿರಿಸಿತ್ತು. ಇಂದು ಅರ್ಜಿ ಕೈಗೆತ್ತಿಕೊಂಡ ಕೋರ್ಟ್ ಆದೇಶವನ್ನು ಮತ್ತೆ ಮುಂದೂಡಿದೆ. ಮುಡಾ ಕೇಸ್ ಕುರುತು ಬಿ ರಿಪೋರ್ಟ್ ಗೆ ಆಕ್ಷೇಪ ವ್ಯಕ್ತಪಡಿಸಿ ಸ್ನೇಹಮಯ ಕೃಷ್ಣ ಸಲ್ಲಿಸಿದ್ದ ಅರ್ಜಿ ಕುರಿತು ಆದೇಶವನ್ನು ಜನವರಿ 28ಕ್ಕೆ ಮುಂದೂಡಿ ಆದೇಶ ಹೊರಡಿಸಿದೆ.

