ಸಿಎಂ ಸಿದ್ದರಾಮಯ್ಯಗೆ ‘ಮುಡಾ’ ಸಂಕಷ್ಟ : ರಾಜೀನಾಮೆಗೆ ಬಿಗಿ ಪಟ್ಟು ಹಿಡಿದ ಬಿಜೆಪಿ..!

ಬೆಂಗಳೂರು : ಮುಡಾ ಹಗರಣದ ರೂವಾರಿ ಸಿದ್ದರಾಮಯ್ಯನವರೇ ಮೊಂಡತನ ಬಿಟ್ಟು ರಾಜೀನಾಮೆ ನೀಡಿ ಎಂದು ಬಿಜೆಪಿ ಪಟ್ಟು ಹಿಡಿದಿದೆ.

ರಾಜ್ಯ ಸರ್ಕಾರವೇ ಭ್ರಷ್ಟಾಚಾರ, ಸ್ವಜನ ಪಕ್ಷಪಾತ, ಕಮಿಷನ್ ದಂಧೆ ಹಾಗೂ ವರ್ಗಾವಣೆ ದಂಧೆಯಲ್ಲಿ ಮುಳುಗಿದೆ. ವಿರೋಧ ಪಕ್ಷಗಳು ಹಾಗೂ ಜನರ ಕಣ್ಣು ತಪ್ಪಿಸಬಹುದು ಕಾನೂನಿಗೆ ಮಣ್ಣೆರಚಲು ಸಾಧ್ಯವಿಲ್ಲ. ರಾಜೀನಾಮೆ ಕೊಟ್ಟು ತೊಲಗಿ ಮುಡಾ ಹಗರಣದ ರೂವಾರಿ ಸಿದ್ದರಾಮಯ್ಯನವರೇ ಮೊಂಡತನ ಬಿಟ್ಟು ರಾಜೀನಾಮೆ ನೀಡಿ ಎಂದು ಬಿಜೆಪಿ ಟ್ವೀಟ್ ಮೂಲಕ ಆಗ್ರಹಿಸಿದೆ.

ಕರುನಾಡಿನ ಸ್ಕ್ಯಾಮ್ ಸಿಎಂ  Siddaramaiah  ನೇತೃತ್ವದ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರಕ್ಕೆ ಕಡಿವಾಣ ಬಿದ್ದಿದೆ. ರಾಜ್ಯಪಾಲರು ತನಿಖೆಗೆ ಆದೇಶ ನೀಡಿರುವುದು ನಾಡಿನ ಸಮಸ್ತ ಜನರ ನೆಮ್ಮದಿಗೆ, ರಾಜ್ಯದ ಅಭಿವೃದ್ಧಿಗೆ ನಾಂದಿಯಾಡಲಿದೆ.

ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯನವರ ಹಸ್ತಕ್ಷೇಪ ಖಚಿತವಾಗಿದೆ. ಮುಖ್ಯಮಂತ್ರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ರಾಜ್ಯಪಾಲರು ಅನುಮತಿ ನೀಡಿದ್ದಾರೆ. ಬಿಜೆಪಿ ಹೋರಾಟಕ್ಕೂ ಜಯ ಸಿಕ್ಕಿದೆ ಎಂದು ಆರ್ ಅಶೋಕ್ ಹೇಳಿದ್ದಾರೆ.

ಗೌರವಾನ್ವಿತ ರಾಜ್ಯಪಾಲರು ತಮ್ಮ ಸಂವಿಧಾನ ದತ್ತ ಅಧಿಕಾರ ಚಲಾಯಿಸಿ ಮುಖ್ಯಮಂತ್ರಿಗಳ ಮುಡಾ ಹಗರಣದ ದೂರಿಗೆ ಕಾನೂನು ಕ್ರಮ ಕೈಗೊಳ್ಳಲು ಅನುಮತಿ ನೀಡಿದ್ದಾರೆ. ಸಾಕಷ್ಟು ದಾಖಲೆ, ಪುರಾವೆಗಳನ್ನು ಇಟ್ಟುಕೊಂಡು ಕಾಂಗ್ರೆಸ್ ಸರ್ಕಾರದ ಭ್ರಷ್ಟ ಹಗರಣಗಳ ವಿರುದ್ಧ ಹಾಗೂ ಮುಖ್ಯಮಂತ್ರಿಗಳ ಸ್ವಜನ ಪಕ್ಷಪಾತ ಹಾಗೂ ಭ್ರಷ್ಟಾಚಾರದಲ್ಲಿ ಭಾಗಿಯಾಗಿರುವುದರ ವಿರುದ್ಧ ಎಷ್ಟೇ ಹೋರಾಟ ನಡೆಸಿದರೂ ತಮ್ಮನ್ನು ಜಗ್ಗಿಸುವವರಿಲ್ಲ ಎಂದು ಭಂಡತನ ಪ್ರದರ್ಶಿಸುತ್ತಿದ್ದ ಸಿದ್ದರಾಮಯ್ಯನವರು ಪ್ರಕರಣದ ತನಿಖೆ ಪಾರದರ್ಶಕವಾಗಿ ನಡೆಯಲು ಅನುವಾಗುವಂತೆ ಈಗಲಾದರೂ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿ ಮುಖ್ಯಮಂತ್ರಿ ಸ್ಥಾನದ ಘನತೆ ಉಳಿಸಲಿ ಎಂದು ಬಿ ವೈ ವಿಜಯೇಂದ್ರ ಆಗ್ರಹಿಸಿದ್ದಾರೆ.

https://twitter.com/BJP4Karnataka/status/1824733106651177098

https://twitter.com/BYVijayendra/status/1824682342209949919

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read