HomeLive NewsBREAKING: ಮೂಡಬಿದರೆ ಇನ್ಸ್ ಪೆಕ್ಟರ್ ಸಂದೇಶ ಲೈಂಗಿಕ ದೌರ್ಜನ್ಯ ಪ್ರಕರಣ: ಸಿಐಡಿ ತನಿಖೆಗೆ ಆದೇಶ: ಗೃಹ...

BREAKING: ಮೂಡಬಿದರೆ ಇನ್ಸ್ ಪೆಕ್ಟರ್ ಸಂದೇಶ ಲೈಂಗಿಕ ದೌರ್ಜನ್ಯ ಪ್ರಕರಣ: ಸಿಐಡಿ ತನಿಖೆಗೆ ಆದೇಶ: ಗೃಹ ಸಚಿವ ಪರಮೇಶ್ವರ್

ಬೆಂಗಳೂರು: ಮೂಡಬಿದರೆ ಇನ್ಸ್ ಪೆಕ್ಟರ್ ಸಂದೇಶ್ ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲು ಆದೇಶ ನೀಡಲಾಗಿದೆ ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ.

ಬೆಂಗಳೂರಿನ ಸದಾಶಿವನಗರದಲ್ಲಿರುವ ಸರ್ಕಾರಿ ನಿವಾಸದಲ್ಲಿ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌದರಿ ಅವರೊಂದಿಗೆ ನಾಲ್ವರು ಸಂತ್ರಸ್ತೆಯರು ಗೃಹ ಸಚಿವ ಪರಮೇಶ್ವರ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವರು, ಸಂತ್ರಸ್ತೆಯರು ಭೇಟಿ ವೇಳೆ ಹಲವು ಮಾಹಿತಿಗಳನ್ನು ನೀಡಿದ್ದಾರೆ. ಈಗಾಗಲೇ ಇನ್ಸ್ ಪೆಕ್ಟರ್ ಸಸ್ಪೆಂಡ್ ಆಗಿದ್ದಾರೆ. ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲು ನಾನು ತೀರ್ಮಾನಿಸಿದ್ದೇನೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಂತ್ರಸ್ತೆಯರು ನೀಡಿರುವ ಮಾಹಿತಿಯಿಂದ ಇನ್ನಷ್ಟು ತನಿಖೆ ಅಗತ್ಯವಿದೆ ಎನಿಸಿದೆ. ಸಿಐಡಿ ತನಿಖೆ ಬಳಿಕ ಕ್ರಮ ಕೈಗೊಳ್ಳಲಾಗುವುದು. ಸದ್ಯ ಇನ್ಸ್ ಪೆಕ್ಟರ್ ಸಸ್ಪೆಂಡ್ ಮಾಡಿರುವುದೇ ತಕ್ಷಣದ ಕ್ರಮ ಎಂದರು. ಇನ್ನಷ್ಟು ಸಂತ್ರಸ್ತೆಯರ ಬಗ್ಗೆಯೂ ತನಿಖೆಯಿಂದ ತಿಳಿಯಲಿದೆ ಎಂದರು.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular